Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

By ANU News
July 28, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ಡಿಜಿ & ಐಜಿಪಿ ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.

ಅಕ್ರಮ ಮರಳು ದಂಧೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಗಂಭೀರ ಸವಾಲು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸುತ್ತೋಲೆಯ ಪ್ರಕಾರ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸಬೇಕು. ಅಕ್ರಮ ಸಾಗಣೆ, ಸಂಗ್ರಹಣೆ ತಡೆದು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಹೊಣೆಗಾರಿಕೆ ಸಂಬಂಧಿತ ಪೊಲೀಸ್ ಅಧಿಕಾರಿಗಳದ್ದಾಗಿರುತ್ತದೆ.

ರಾಜ್ಯಾಂತರ ಗಡಿಗಳಲ್ಲಿ ನಡೆಯುವ ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ. ತನಿಖೆ ಮತ್ತು ಜಾರಿ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವ ಜೊತೆಗೆ ಅಗತ್ಯ ಮೂಲಸೌಕರ್ಯ ಕೊರತೆ ಕಂಡುಬಂದರೆ ತಕ್ಷಣ ಸಂಬಂಧಿತ ಇಲಾಖೆಯ ಗಮನಕ್ಕೆ ತರಬೇಕು ಎಂದು ಆದೇಶಿಸಲಾಗಿದೆ.

ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದರ ಜೊತೆಗೆ ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪದೇಪದೇ ಅಕ್ರಮ ಮರಳು ದಂಧೆಯಲ್ಲಿ ತೊಡಗುವ ಅಭ್ಯಾಸದ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಎಲ್ಲಾ ಪೊಲೀಸ್ ಘಟಕಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ ಅಕ್ರಮ ಮರಳು ಪ್ರಕರಣಗಳ ಪ್ರಗತಿಯನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಡಿಜಿ & ಐಜಿಪಿ ಸೂಚಿಸಿದ್ದಾರೆ.

Author

ANU News

Follow Me
Other Articles
Previous

Indian community in Qatar bids emotional farewell to Ambassador Vipul

Next

Karnataka cracks down on illegal sand mining; habitual offenders to face Goonda Act

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka CM Seeks Centre’s Approval for 13 Key Projects, Meets MPs in New Delhi
    • ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ
    • ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ
    • Over 1.12 Lakh PM-Vidyalaxmi Education Loans Sanctioned Since Launch: Centre
    • ಎನ್‌ಇಪಿ 2020 ಜಾರಿಯಿಂದ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆ: ಕೇಂದ್ರ
    Copyright 2026 — ANU News. All rights reserved. Blogsy WordPress Theme