Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

By ANU News
May 24, 2026 1 Min Read
0

ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

ಜಪ್ತಿ ಮಾಡಲಾದ ರಸಗೊಬ್ಬರದ ಅಂದಾಜು ಮೌಲ್ಯ ಸುಮಾರು ₹14.40 ಲಕ್ಷ ಎಂದು ತಿಳಿದುಬಂದಿದೆ. ರೈತರಿಗೆ ವಿತರಿಸಬೇಕಾದ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು.

ಜಂಟಿ ಕೃಷಿ ನಿರ್ದೇಶಕರು (ಜಾಗೃತ ಕೋಶ) ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರು, ಟಿ. ನರಸೀಪುರದ ಸಹಾಯಕ ನಿರ್ದೇಶಕರು ಹಾಗೂ ಬನ್ನೂರು ಕೃಷಿ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮವನ್ನು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಮೂಲಕ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಅಕ್ರಮ ರಸಗೊಬ್ಬರ ದಾಸ್ತಾನು ಮತ್ತು ಕಾಳಸಂತೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆ ಎಚ್ಚರಿಕೆ ನೀಡಿವೆ.

Author

ANU News

Follow Me
Other Articles
Previous

ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ

Next

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka to move SC over Centre withholding ₹2,186 crore in panchayat grants
    • ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
    • ಹಾರ್ಮುಜ್‌ನಲ್ಲಿ ಇರಾನ್‌ ರಣಕಹಳೆ: 20ಕ್ಕೂ ಹೆಚ್ಚು ಹಡಗುಗಳಿಗೆ ಗುರಿ!
    • Iran expands Hormuz no-go zone as tensions rise, oil prices cross $100
    • ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ
    Copyright 2026 — ANU News. All rights reserved. Blogsy WordPress Theme