Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ

By ANU News
July 5, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ. ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬೆನ್ನಲ್ಲೇ, ಬಿಜೆಪಿ ನಿಯೋಗವೂ ಆಯೋಗಕ್ಕೆ ಪ್ರತ್ಯೇಕ ಮನವಿ ಸಲ್ಲಿಸಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಿಯಮಾನುಸಾರ ಮನೆ ಮನೆಗೆ ತೆರಳಿ ನಡೆಸಬೇಕಾದರೂ, ಕೆಲವು ಕಡೆಗಳಲ್ಲಿ ಮಸೀದಿಗಳಲ್ಲಿ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ.

“ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅದು ಯಾವುದೇ ರಾಜಕೀಯ ಹಿತಾಸಕ್ತಿಯ ಸಾಧನವಾಗಬಾರದು. ನಿಯಮಗಳನ್ನು ಉಲ್ಲಂಘಿಸಿ ಪ್ರಕ್ರಿಯೆ ನಡೆಸುತ್ತಿರುವ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ಆಗ್ರಹಿಸಿದೆ.

ಇದೇ ವೇಳೆ, ಅಕ್ರಮ ವಲಸಿಗರು ಮತ್ತು ನುಸುಳುಕೋರರಿಗೆ ಕಾಂಗ್ರೆಸ್ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿರುವ ಪಕ್ಷ, ಈ ವಿಚಾರವನ್ನು ರಾಜ್ಯದ ಜನತೆ ಗಂಭೀರವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದೆ.

ನಿಯಮ ಬಾಹಿರವಾಗಿ ಮಸೀದಿಗಳಲ್ಲಿ SIR ಪರಿಷ್ಕರಣೆ!

ಮನೆ ಮನೆಗೆ ತೆರಳಿ ನಡೆಸಬೇಕಾದ SIR ಪ್ರಕ್ರಿಯೆಯನ್ನು ಬಿಟ್ಟು, ನಿಯಮ ಉಲ್ಲಂಘಿಸಿ ಮಸೀದಿಗಳಲ್ಲಿ ಪರಿಷ್ಕರಣೆ ನಡೆಸುತ್ತಿರುವುದೇಕೆ? ಅಕ್ರಮ ಬ್ರದರ್ಸ್‌ಗಳನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್‌ ಅಧಿಕಾರ ದುರ್ಬಳಕೆ ಮಾಡಿಕೊಂಡು ವಾಮಮಾರ್ಗ ಹಿಡಿದಿರುವುದು ಬಯಲಾಗಿದೆ.

ಪ್ರಜಾಪ್ರಭುತ್ವದಲ್ಲಿ… pic.twitter.com/Jeloe9oQUb

— BJP Karnataka (@BJP4Karnataka) July 5, 2026

Author

ANU News

Follow Me
Other Articles
Previous

Eight Killed in Separate Accidents in Andhra Pradesh and Telangana

Next

BJP Alleges Irregularities in Voter List Revision, Targets Congress Over SIR Process

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Cars will fly’: Almora innovator Ravi Tamta tests flying car prototype
    • ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !
    • ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
    • ‘ನಶಾ ಮುಕ್ತ ಭಾರತ’ ಸಂದೇಶದೊಂದಿಗೆ ಗಮನಸೆಳೆದ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’
    • Say yes to fitness, no to drugs: Mandaviya leads nationwide cycling drive
    Copyright 2026 — ANU News. All rights reserved. Blogsy WordPress Theme