Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ

By ANU News
August 6, 2026 1 Min Read
0

ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ಕರ್ನಾಟಕದಲ್ಲಿ ಶೇ.20ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5.40 ಕೋಟಿ ಮತದಾರರಲ್ಲಿ 20 ಪ್ರತಿಶತದಷ್ಟು ಮತದಾರರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತದಾರರನ್ನು ಗುರಿಯಾಗಿಸಿಕೊಂಡು ಈ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಗೈರು, ಮೃತಪಟ್ಟವರು, ವಿಳಾಸ ಬದಲಾವಣೆ ಹಾಗೂ ನಕಲಿ ದಾಖಲೆಗಳ ಹೆಸರಿನಲ್ಲಿ ಅರ್ಹ ಮತದಾರರ ಹೆಸರನ್ನೂ ಕೈಬಿಡಲಾಗುತ್ತಿದೆ. ಹಲವು ಕಡೆ ಮನೆ-ಮನೆಗೆ ತೆರಳಿ ಗಣತಿ ನಮೂನೆ ವಿತರಿಸದೇ ಮತದಾರರನ್ನು ಗೈರು ಎಂದು ಗುರುತಿಸಲಾಗಿದೆ ಎಂದು ದೂರಿದರು.

ಅರ್ಹ ಮತದಾರರ ಮತದಾನದ ಹಕ್ಕು ರಕ್ಷಿಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ. ಆದರೆ ರಾಜ್ಯ ಚುನಾವಣಾ ಆಯೋಗವು ಕಾಂಗ್ರೆಸ್ ನೀಡಿರುವ ಹಲವು ಮನವಿಗಳಿಗೆ ಸಮರ್ಪಕ ಉತ್ತರ ನೀಡಿಲ್ಲ. ಎಲ್ಲಾ ಮತಗಟ್ಟೆಗಳಲ್ಲಿ ಸಹಾಯ ಕೇಂದ್ರ ತೆರೆಯುವುದಾಗಿ ಹೇಳಿದ್ದರೂ ಅದನ್ನು ಅನುಷ್ಠಾನಗೊಳಿಸಿಲ್ಲ ಎಂದು ಟೀಕಿಸಿದರು.

ಎಸ್‌ಐಆರ್‌ ಫಾರ್ಮ್ ಸಲ್ಲಿಕೆಗೆ ನೀಡಿರುವ ಅವಧಿಯನ್ನು ಕನಿಷ್ಠ ಒಂದು ತಿಂಗಳು ವಿಸ್ತರಿಸಬೇಕು. ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವುದನ್ನು ತಕ್ಷಣವೇ ತಡೆಯಬೇಕು. ಅಗತ್ಯವಿದ್ದರೆ ಈ ವಿಚಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ರಮೇಶ್ ಬಾಬು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪದವೀಧರರ ವಿಭಾಗದ ಅಧ್ಯಕ್ಷ ನಟರಾಜ ಗೌಡ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಉಪಸ್ಥಿತರಿದ್ದರು.

Author

ANU News

Follow Me
Other Articles
Previous

ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ

Next

‘ಓಬಿಸಿ, ಜಾತಿ ಜನಗಣತಿ ವರದಿ ಜಾರಿಗೆ ಹೋರಾಟ ಅಗತ್ಯ’; ರಾಷ್ಟ್ರೀಯ ಸಮಾವೇಶದಲ್ಲಿ ಹರಿಪ್ರಸಾದ್ ಕರೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Cars will fly’: Almora innovator Ravi Tamta tests flying car prototype
    • ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !
    • ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
    • ‘ನಶಾ ಮುಕ್ತ ಭಾರತ’ ಸಂದೇಶದೊಂದಿಗೆ ಗಮನಸೆಳೆದ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’
    • Say yes to fitness, no to drugs: Mandaviya leads nationwide cycling drive
    Copyright 2026 — ANU News. All rights reserved. Blogsy WordPress Theme