Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಸಿನಿಮಾ

‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

By ANU News
July 8, 2026 1 Min Read
0

ಬೆಂಗಳೂರು: ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಹಾಗೂ ರಮೇಶ್ ಇಂದಿರ ನಟನೆಯ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಚಿತ್ರದ ಟ್ರೇಲರ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಜುಲೈ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಗುರುದತ್ ಗಾಣಿಗ ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್‌ನಲ್ಲಿ ಕರಾವಳಿ ಸಂಸ್ಕೃತಿ, ಸಂಪ್ರದಾಯ ಹಾಗೂ ಕಂಬಳ ಕ್ರೀಡೆಯ ವೈಭವವನ್ನು ಪ್ರಮುಖವಾಗಿ ಅನಾವರಣಗೊಳಿಸಲಾಗಿದೆ. ಕರಾವಳಿಯ ಜೀವನಶೈಲಿ ಮತ್ತು ಜನಪದ ಸಂಸ್ಕೃತಿಯನ್ನು ಅದ್ಧೂರಿಯಾಗಿ ತೆರೆ ಮೇಲೆ ಕಟ್ಟಿಕೊಡುವ ಪ್ರಯತ್ನ ಟ್ರೇಲರ್‌ನಲ್ಲಿ ಗೋಚರಿಸುತ್ತದೆ.

ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಗುರುದತ್ ಗಾಣಿಗ, ನಟ ರಾಜ್ ಬಿ. ಶೆಟ್ಟಿ, ನಟಿಯರಾದ ಸಂಪದಾ ಮತ್ತು ಸುಷ್ಮಿತಾ, ನಟರಾದ ಮಿತ್ರ, ಶ್ರೀಧರ್ ಸೇರಿದಂತೆ ಚಿತ್ರತಂಡದ ಸದಸ್ಯರು ಭಾಗವಹಿಸಿದ್ದರು. ಆದರೆ ಚಿತ್ರದ ನಾಯಕ ಪ್ರಜ್ವಲ್ ದೇವರಾಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿಲ್ಲ.

ಚಿತ್ರದ ಕುರಿತು ಮತ್ತೊಂದು ವಿಶೇಷವೆಂದರೆ, ಟ್ರೇಲರ್‌ಗೆ ಪ್ರಜ್ವಲ್ ದೇವರಾಜ್ ಸ್ವತಃ ಡಬ್ಬಿಂಗ್ ಮಾಡಿಲ್ಲ ಎಂಬ ಮಾಹಿತಿ ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆಯೂ ಟ್ರೇಲರ್‌ಗೆ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

Author

ANU News

Follow Me
Other Articles
Previous

Belagavi DC Orders Probe into Alleged Use of Schoolchildren in Electoral Roll Revision

Next

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
    • ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
    • DRI busts bid to import banned Pakistan goods through UAE, seizes ₹3 crore consignment
    • India Post sets up special Rakhi counters across Delhi; urges early booking for timely delivery
    • ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
    Copyright 2026 — ANU News. All rights reserved. Blogsy WordPress Theme