Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ

By ANU News
July 14, 2026 1 Min Read
0

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ ಕಾಂಪೌಂಡ್ ಗೋಡೆ ಏರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಇವರು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

Oplus_16908288

ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ 15ರಿಂದ 20 ಅಡಿ ಎತ್ತರದ ಜೈಲು ಗೋಡೆ ಹಾರಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನ ಭದ್ರತಾ ವ್ಯವಸ್ಥೆ, ಬ್ಯಾರಕ್‌ಗಳು ಹಾಗೂ ಕಾಂಪೌಂಡ್ ಗೋಡೆಯ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಪರಾರಿಯಾದ ಕೈದಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.

Author

ANU News

Follow Me
Other Articles
Previous

Weak Monsoon Hits K’taka; Inflows into Linganamakki, Bhadra Reservoirs Decline

Next

Three Convicted Prisoners Escape from Kalaburagi Central Jail

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಚಲುವರಾಯಸ್ವಾಮಿ
    • Bengaluru gets its first ‘Circular Textile Lab’ to turn textile waste into useful products
    • ಬೆಂಗಳೂರಿನ ಮೊದಲ ‘ಸರ್ಕ್ಯುಲರ್ ಟೆಕ್ಸ್‌ಟೈಲ್ ಲ್ಯಾಬ್’ ಲೋಕಾರ್ಪಣೆ
    • Horror, humour and a mysterious bus: Shine Shetty’s ‘Shankarabharana’ teaser unveiled
    • ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್
    Copyright 2026 — ANU News. All rights reserved. Blogsy WordPress Theme