Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ

By ANU News
July 13, 2026 1 Min Read
0

ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು.

ಹನುಮಂತಪ್ಪ ಅವರು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರೆ, ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂತಾಪ ಸೂಚಿಸಿ, “ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಹೆಚ್. ಹನುಮಂತಪ್ಪ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಸಂಸದೀಯ ಮೌಲ್ಯಗಳನ್ನು ಎತ್ತಿಹಿಡಿದ ಸಮರ್ಪಿತ ನಾಯಕ, ಜನಪರ ರಾಜಕಾರಣಿ ಹಾಗೂ ಸಮಾಜದ ದಮನಿತ ವರ್ಗಗಳ ಧ್ವನಿಯಾಗಿದ್ದ ಅವರ ಸೇವೆ ಸದಾ ಸ್ಮರಣೀಯ. ಅವರ ನಿಧನ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದ್ದಾರೆ.

“ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರು, ಬಂಧು-ಬಳಗ ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು” ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

Author

ANU News

Follow Me
Other Articles
Previous

27 Killed, Over 63 Injured in Massive Bangkok Pub Fire

Next

Senior Congress Leader, Former Rajya Sabha MP H. Hanumanthappa Passes Away

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme