Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

By ANU News
June 27, 2026 1 Min Read
0

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದರು.

ಈ ವೇಳೆ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ನಿಯಂತ್ರಣ ತಪ್ಪಿ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ರಮೇಶ್ ಬಳ್ಳಾರಿ (45), ಕೆಂಚಮ್ಮ ಬಾಳೆಕಾಯಿ (35) ಹಾಗೂ ಅಮೃತಾ (25) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Author

ANU News

Follow Me
Other Articles
Previous

‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

Next

Three killed, six injured in Koppal road accident on NH-63 near Bhanapur

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme