Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

By ANU News
May 15, 2026 1 Min Read
0

ಕೊಪ್ಪಳ: ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎನ್ನಲಾಗಿದೆ.

ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Author

ANU News

Follow Me
Other Articles
Previous

ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

Next

ಮಲೇಶಿಯಾದ ಪೋರ್ಟ್ ಕ್ಲಾಂಗ್‌’ನಲ್ಲಿ ‘ಐಎನ್‌ಎಸ್ ಸಾಗರಧ್ವನಿ’ ಕಮಾಲ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್
    • ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
    • Ladakh body warns of intensified agitation if Centre fails to make ‘clear progress
    • Civic apathy won’t be tolerated, says Krishna Byre Gowda during surprise Bengaluru inspectio
    • ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
    Copyright 2026 — ANU News. All rights reserved. Blogsy WordPress Theme