Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಡಿಕೆಶಿ ಸಂಧಾನ: ರಾಮಲಿಂಗಾ ರೆಡ್ಡಿ ರಾಜೀನಾಮೆ ವಿವಾದಕ್ಕೆ ತಾತ್ಕಾಲಿಕ ತೆರೆ?

By Anu News
June 6, 2026 1 Min Read
0

ಬೆಂಗಳೂರು: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರೂ, ಇದೀಗ ವಿವಾದ ಶಮನವಾಗುವ ಲಕ್ಷಣಗಳು ಕಂಡುಬಂದಿವೆ.

ಹೈಕಮಾಂಡ್ ಸೂಚನೆಯ ಬಳಿಕ ಶುಕ್ರವಾರ ತಡರಾತ್ರಿ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ಸುಮಾರು ಎರಡೂವರೆ ಗಂಟೆಗಳ ಕಾಲ ಸುದೀರ್ಘ ಸಂಧಾನ ಮಾತುಕತೆ ನಡೆಯಿತು. ರಾತ್ರಿ 11 ಗಂಟೆಯಿಂದ ಬೆಳಗಿನ 1.30ರವರೆಗೆ ನಡೆದ ಸಭೆಯಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆ ನಡೆಸಲಾಗಿದೆ.

“ಬೆಂಗಳೂರು ನಗರಾಭಿವೃದ್ಧಿ ಖಾತೆ ಇಲ್ಲದಿದ್ದರೆ ಸಚಿವ ಸ್ಥಾನವೇ ಬೇಡ” ಎಂಬ ನಿಲುವು ತಳೆದಿದ್ದ ರಾಮಲಿಂಗಾ ರೆಡ್ಡಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. 2023ರಲ್ಲೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವ ಭರವಸೆ ನೀಡಲಾಗಿತ್ತು ಎಂದು ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಮಾತುಕತೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಇದು ನಮ್ಮ ಕುಟುಂಬದ ವಿಚಾರ. ನಾವು ಹಳೆಯ ಸ್ನೇಹಿತರು. ಕುಳಿತು ಮಾತನಾಡಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಂಡಿದ್ದೇವೆ” ಎಂದು ಹೇಳಿದರು.

ಇದೇ ವೇಳೆ ರಾಮಲಿಂಗಾ ರೆಡ್ಡಿ, “ಎಲ್ಲ ಗೊಂದಲಗಳು ನಿವಾರಣೆಯಾಗಿವೆ” ಎಂದು ಹೇಳಿ ಸ್ಥಳದಿಂದ ನಿರ್ಗಮಿಸಿದರು.

ಇದರೊಂದಿಗೆ ಖಾತೆ ಹಂಚಿಕೆ ವಿಚಾರವಾಗಿ ಸರ್ಕಾರದೊಳಗೆ ಉಂಟಾಗಿದ್ದ ಮೊದಲ ದೊಡ್ಡ ಬಿಕ್ಕಟ್ಟು ತಾತ್ಕಾಲಿಕವಾಗಿ ಶಮನಗೊಂಡಿರುವಂತೆ ಕಾಣುತ್ತಿದೆ.

Author

Anu News

Follow Me
Other Articles
Previous

2027ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ; ಜುಲೈ 31 ಕೊನೆಯ ದಿನ

Next

ಅಂಡಮಾನ್ ಸಮುದ್ರದಲ್ಲಿ ನೈಸರ್ಗಿಕ ಅನಿಲ ಪತ್ತೆ; ಇಂಧನ ಕ್ಷೇತ್ರಕ್ಕೆ ಹೊಸ ಉತ್ತೇಜನ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್
    • ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
    • Ladakh body warns of intensified agitation if Centre fails to make ‘clear progress
    • Civic apathy won’t be tolerated, says Krishna Byre Gowda during surprise Bengaluru inspectio
    • ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
    Copyright 2026 — ANU News. All rights reserved. Blogsy WordPress Theme