Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ

By ANU News
August 4, 2026 1 Min Read
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರು ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷವು ಈ ಬಾರಿ ಬ್ರಾಹ್ಮಣ ಸಮುದಾಯವನ್ನು ಸಚಿವ ಸಂಪುಟದಲ್ಲಿ ಕಡೆಗಣಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಆರು ಬಾರಿ ಶಾಸಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಅವರು ಕಳೆದ ಹಲವು ದಶಕಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಇಂತಹ ಹಿರಿಯ ನಾಯಕನಿಗೆ ಸಚಿವ ಸ್ಥಾನ ನೀಡದಿರುವುದು ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು. ದಿನೇಶ್ ಗುಂಡೂರಾವ್ ಅವರಿಗೆ ನ್ಯಾಯ ಒದಗಿಸಿ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಬಳಿಕ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಮನವಿಯನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ತಲುಪಿಸುವುದಾಗಿ ಹರಿಪ್ರಸಾದ್ ಭರವಸೆ ನೀಡಿದರು.

Author

ANU News

Follow Me
Other Articles
Previous

Basavaraj Horatti Calls CM’s Resignation Request ‘Political’, Says Constitutional Process Must Be Followed

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ
    • Basavaraj Horatti Calls CM’s Resignation Request ‘Political’, Says Constitutional Process Must Be Followed
    • ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ
    • ‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
    • ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
    Copyright 2026 — ANU News. All rights reserved. Blogsy WordPress Theme