ದಿಲ್ಲಿ ಚಲೋ ಸಂಕಷ್ಟ: INDIA ಬಣದ ಹೋರಾಟಗಾರರ ವಿರುದ್ಧ ನಾಲ್ಕು ಎಫ್‌ಐಆರ್
ನವದೆಹಲಿ: INDIA ಬಣದ ನಾಯಕರು ಸುಪ್ರೀಂಕೋರ್ಟ್‌ಗೆ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರ ಅಡಿಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಈ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿಯ ಕನ್ನಾಟ್ ಪ್ಲೇಸ್, ತಿಲಕ್ ಮಾರ್ಗ್, ಮಂದಿರ್ ಮಾರ್ಗ್ ಮತ್ತು ಬಾರಾಖಂಬಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದರೆ, ಮಂದಿರ್ ಮಾರ್ಗ್ ಮತ್ತು ಬಾರಾಖಂಬಾ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಎಫ್‌ಐಆರ್ ದಾಖಲಿಸಲಾಗಿದೆ.
ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.