Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

By ANU News
July 27, 2026 1 Min Read
0

ಅಮೃತಸರ: ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆದು ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದರೂ, ಭದ್ರತಾ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಾಳಿ ನಡೆಸಿದವರನ್ನು ಗುರುತಿಸಲು ಹಾಗೂ ದಾಳಿಯ ಹಿಂದಿನ ಉದ್ದೇಶ ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಬಿಜೆಪಿ ಕಚೇರಿ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Author

ANU News

Follow Me
Other Articles
Previous

‘Let Police Touch C.T. Ravi If Govt Has the Courage’: BJP’s R. Ashok

Next

Police investigate petrol bomb attack on BJP office in Punjab

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ
    • Probe sought into alleged lapses, poor quality in Jal Jeevan Mission works
    • Kannada school reopens in Qatar with renewed focus on language, culture
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
    • Mekedatu project is only permanent solution to Cauvery dispute, says K’taka minister
    Copyright 2026 — ANU News. All rights reserved. Blogsy WordPress Theme