ಪುಣೆಯ ಟಿಂಬರ್ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ; 60ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ
ಪುಣೆ: ಮಹಾರಾಷ್ಟ್ರದ ಪುಣೆಯ ಟಿಂಬರ್ ಮಾರುಕಟ್ಟೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 60ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿಯಾಗಿದೆ.
ಜೈ ವಲ್ಲಭ್ ಶಾಲೆಯ ಸಮೀಪದ ಅಂಗಡಿಗಳಲ್ಲಿ ಮುಂಜಾನೆ 2.05ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು, ಮರದ ದಿಮ್ಮಿ ಹಾಗೂ ಮರದ ಉತ್ಪನ್ನಗಳ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ವ್ಯಾಪಿಸಿದೆ.

ಬೆಂಕಿ ನಂದಿಸಲು ಒಟ್ಟು 27 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು. ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಹಾಗೂ 10 ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು ಎರಡು ಗಂಟೆಗಳ ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಬೆಂಕಿ ವಸತಿ ಪ್ರದೇಶ ಹಾಗೂ ಮನೆಗಳಿಗೆ ಹರಡದಂತೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದರು.