Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆ: ಡಿಕೆಶಿ

By ANU News
August 27, 2026 1 Min Read
0

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ನಿವೇಶನ ಹಂಚಿಕೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಸರ್ಕಾರಿ ಜಮೀನುಗಳನ್ನು ಗುರುತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳಲ್ಲಿ ಬೋಗಸ್ ಬಿಲ್‌ಗಳಿಗೆ ಅವಕಾಶ ನೀಡಬಾರದು. ಫಲಾನುಭವಿಗಳ ಹಿಂದಿನ ಹಾಗೂ ಪ್ರಸ್ತುತ ಪರಿಸ್ಥಿತಿಯ ಸಂಪೂರ್ಣ ಮಾಹಿತಿ ಪಡೆಯಬೇಕು ಎಂದು ಶಾಸಕರಿಗೆ ಸೂಚಿಸಲಾಗಿದೆ ಎಂದರು.

ಕಸ್ತೂರಿರಂಗನ್ ವರದಿ ಆಧರಿಸಿ ಕೇಂದ್ರ ಹೊರಡಿಸಿರುವ 7ನೇ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು. ರಾಜ್ಯದ 20,668 ಚ.ಕಿ.ಮೀ. ಪ್ರದೇಶ, 10 ಜಿಲ್ಲೆಗಳ 33 ತಾಲೂಕುಗಳು ಹಾಗೂ 1,449 ಗ್ರಾಮಗಳು ESA ವ್ಯಾಪ್ತಿಗೆ ಬರಲಿದ್ದು, ಇದರಿಂದ ಕೃಷಿಕರ ಜೀವನೋಪಾಯಕ್ಕೆ ತೊಂದರೆಯಾಗಬಹುದು. ಆದ್ದರಿಂದ ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು ಎಂದು ಕೇಂದ್ರವನ್ನು ಒತ್ತಾಯಿಸಲಾಗುವುದು ಎಂದರು.

ರಾಜ್ಯದಲ್ಲಿ 100ಕ್ಕೂ ಹೆಚ್ಚು ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಎಂದು ಘೋಷಿಸಲಾಗುವುದು. ಕೇಂದ್ರದಿಂದ ಬರ ಪರಿಹಾರ ಪಡೆಯಲು ನಿಯೋಗದೊಂದಿಗೆ ತೆರಳಿ ಮನವಿ ಮಾಡುವುದಾಗಿ ಶಿವಕುಮಾರ್ ಹೇಳಿದರು.

ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನವೆಂಬರ್ ಒಳಗೆ ಪಂಚಾಯಿತಿ ಹಾಗೂ ಪಾಲಿಕೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಅರ್ಹ ಮತದಾರರ ಹಕ್ಕು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

‘ಭಾರತ್ ಜೋಡೋ ಯುವಸಂಘ’ದಲ್ಲಿ ಈಗಾಗಲೇ 7 ಲಕ್ಷ ಯುವಕರು ಆನ್‌ಲೈನ್ ನೋಂದಣಿ ಮಾಡಿಕೊಂಡಿದ್ದು, ಪ್ರತಿ ಸಂಘಕ್ಕೆ ₹10 ಲಕ್ಷ ನೀಡಲಾಗುವುದು. ಕ್ರೀಡೆ, ಯೋಗ, ಸಮುದಾಯ ಸೇವೆ, ನಾಯಕತ್ವ ಹಾಗೂ ವಿಪತ್ತು ನಿರ್ವಹಣೆಗೆ ಒತ್ತು ನೀಡಲಾಗುವುದು ಎಂದರು.

ಬೆಂಗಳೂರು ಹಸಿರು ವಲಯ ವಿಸ್ತರಣೆಗೆ 5,000ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

Author

ANU News

Follow Me
Other Articles
Previous

Nepal Floods: 160 Feared Dead, 133 Indians Missing

Next

100ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತ: ಶೀಘ್ರ ಘೋಷಣೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಓಣಂ ಸಂಭ್ರಮಕ್ಕೆ ಮುನ್ನ ಕೇರಳದ 4.4 ಲಕ್ಷ ಪಿಂಚಣಿದಾರರಿಗೆ EPFO ಪಿಂಚಣಿ
    • ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ
    • IICT, Netflix announce scholarships for 100 students across six creative programmes
    • ನೇಪಾಳ ಪ್ರವಾಹ: ಕೇಂದ್ರ ಹೈ ಅಲರ್ಟ್; ಬಿಹಾರ, ಯುಪಿ ಗಡಿ ಪ್ರದೇಶಗಳ ಮೇಲೆ ನಿಗಾ
    • Nepal flash floods: Centre on high alert; Bihar, UP border areas closely monitored
    Copyright 2026 — ANU News. All rights reserved. Blogsy WordPress Theme