Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

By ANU News
July 3, 2026 1 Min Read
0

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ ಫುಟ್‌ಪಾತ್ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದ ಸಚಿವರು, ದೊಡ್ಡಾನೆಕ್ಕುಂದಿ ಜಂಕ್ಷನ್‌ನಲ್ಲಿ ಹೊಸದಾಗಿ ಡಾಂಬರು ಹಾಕಿದ್ದ ರಸ್ತೆಯನ್ನೇ ಮತ್ತೆ ಅಗೆದಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡ ಸಚಿವರು, ನಗರದಲ್ಲಿ ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣದಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.

“ವ್ಯಾಪಾರ ಮಾಡಬೇಡಿ ಎಂದು ನಾವು ಹೇಳುತ್ತಿಲ್ಲ. ಆದರೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಪಾದಚಾರಿಗಳಿಗೆ ಸುರಕ್ಷಿತವಾಗಿ ನಡೆಯಲು ಅವಕಾಶ ಸಿಗದ ಕಾರಣ ಪ್ರತಿ ವರ್ಷ ಸುಮಾರು 300 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಈ ಸಾವಿಗೆ ಯಾರು ಹೊಣೆ?” ಎಂದು ಅವರು ಪ್ರಶ್ನಿಸಿದರು.

ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳನ್ನು ತೆರವುಗೊಳಿಸಿ, ಪಕ್ಕದ ರಸ್ತೆಗಳಲ್ಲಿ ವ್ಯಾಪಾರ ನಡೆಸಿದರೆ ಸರ್ಕಾರದಿಂದ ಯಾವುದೇ ತೊಂದರೆ ಇರುವುದಿಲ್ಲ ಎಂದು ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

Author

ANU News

Follow Me
Other Articles
Previous

Apple’s Foldable iPhone Could Debut on September 9; Leaks Hint at ‘iPhone Ultra’

Next

Ministers Conduct Late-Night Inspection of Bengaluru Roads, Pull Up Officials Over Civic Lapses

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
    • ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
    • DRI busts bid to import banned Pakistan goods through UAE, seizes ₹3 crore consignment
    • India Post sets up special Rakhi counters across Delhi; urges early booking for timely delivery
    • ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
    Copyright 2026 — ANU News. All rights reserved. Blogsy WordPress Theme