Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಬಂಗಾಳದಲ್ಲಿ ಮೋದಿ-ಶಾ ಮೋಡಿ; ಮಮತಾ ಬ್ಯಾನರ್ಜಿ ಹೀನಾಯ ಸೋಲು, ಅಂತಿಮ ಫಲಿತಾಂಶ ಹೀಗಿದೆ

By ANU News
May 5, 2026 1 Min Read
0

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ–ಅಮಿತ್ ಶಾ ಜೋಡಿಯ ತಂತ್ರಗಾರಿಕೆಗೆ ಭಾರೀ ಫಲ ದೊರಕಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರದತ್ತ ದಾಪುಗಾಲಿಟ್ಟಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಈ ಬಾರಿ ನಿರಾಶಾದಾಯಕ ಫಲಿತಾಂಶ ಎದುರಾಗಿದೆ.

ಒಟ್ಟು 293 ಸ್ಥಾನಗಳಲ್ಲಿ ಬಿಜೆಪಿ 206 ಕ್ಷೇತ್ರಗಳನ್ನು ಗೆದ್ದು ದ್ವಿಶತಕ ಬಾರಿಸಿದ್ದು, ಭಾರೀ ಮೇಲುಗೈ ಸಾಧಿಸಿದೆ. ಇತ್ತ ಟಿಎಂಸಿ ಕೇವಲ 81 ಸ್ಥಾನಗಳಿಗೆ ಸೀಮಿತವಾಗಿ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ 2 ಸ್ಥಾನಗಳಲ್ಲಿ ಜಯಗಳಿಸಿದ್ದು, ಇತರೆ ಪಕ್ಷಗಳು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ನಾಲ್ಕನೇ ಬಾರಿ ಮುಖ್ಯಮಂತ್ರಿ ಪಟ್ಟಕ್ಕೇರಲು ಉತ್ಸಾಹದಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ ಈ ಚುನಾವಣೆಯಲ್ಲಿ ಭಾರೀ ಹಿನ್ನಡೆ ಎದುರಾಗಿದೆ. ತಮ್ಮ ತವರು ಕ್ಷೇತ್ರ ಭವಾನಿಪುರದಲ್ಲಿಯೇ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಎದುರು ಸೋಲು ಕಂಡಿರುವುದು ಟಿಎಂಸಿ ಶಿಬಿರಕ್ಕೆ ಮತ್ತಷ್ಟು ಆಘಾತ ತಂದಿದೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಬಂಗಾಳದ ರಾಜಕೀಯ ರಣಾಂಗಣದಲ್ಲಿ ಬಿಜೆಪಿ ಸಂಘಟಿತ ತಂತ್ರ ಮತ್ತು ಭರ್ಜರಿ ಪ್ರಚಾರ ಕಾರ್ಯ ಈ ಫಲಿತಾಂಶಕ್ಕೆ ಪ್ರಮುಖ ಕಾರಣವಾಗಿದೆ. ಇತ್ತ ಟಿಎಂಸಿ ಸರ್ಕಾರದ ವಿರುದ್ಧದ ವಿರೋಧ ಅಲೆ ಸಹ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

  • ಪಕ್ಷವಾರು ಅಂತಿಮ ಬಲಾಬಲ ಹೀಗಿದೆ:
  • BJP- 206
  • AITC – 81
  • INC – 2
  • AJUP – 2
  • CPI(M) – 1
Author

ANU News

Follow Me
Other Articles
Previous

Five-State Verdict 2026: BJP Storms Bengal, UDF Sweeps Kerala, TVK Emerges Kingmaker in Tamil Nadu

Next

Modi–Shah Strategy Sweeps Bengal; Mamata Banerjee Suffers Major Setback

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
    • ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
    • DRI busts bid to import banned Pakistan goods through UAE, seizes ₹3 crore consignment
    • India Post sets up special Rakhi counters across Delhi; urges early booking for timely delivery
    • ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
    Copyright 2026 — ANU News. All rights reserved. Blogsy WordPress Theme