Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆ

ಬೆಂಗಳೂರಿನಲ್ಲಿ ಅ. 20ರಿಂದ ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026

By ANU News
October 13, 2026 1 Min Read
0

ಬೆಂಗಳೂರು: ನಗರದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 20ರಿಂದ 25ರವರೆಗೆ ನಡೆಯಲಿರುವ ಪ್ರತಿಷ್ಠಿತ ‘ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026’ ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಪೂರ್ವಸಿದ್ಧತೆಗಳನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೋಮವಾರ ಪರಿಶೀಲಿಸಿದರು.

ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಭಾರತೀಯ ಬಾಸ್ಕೆಟ್‌ಬಾಲ್ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆಯ ಸಹಯೋಗದಲ್ಲಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಏಷ್ಯಾದ ಆರು ಪ್ರಮುಖ ಮಹಿಳಾ ಬಾಸ್ಕೆಟ್‌ಬಾಲ್ ಕ್ಲಬ್ ತಂಡಗಳು ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿವೆ.

ಪಂದ್ಯಾವಳಿಗೆ ಅಗತ್ಯವಿರುವ ಮೂಲಸೌಕರ್ಯ, ವ್ಯವಸ್ಥೆಗಳು ಹಾಗೂ ಇತರ ಸಿದ್ಧತೆಗಳನ್ನು ಪರಿಶೀಲಿಸಿದ ಉಪಮುಖ್ಯಮಂತ್ರಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟವನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಫಿಬಾ ಏಷ್ಯಾ ಅಧ್ಯಕ್ಷರು, ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು, ಸಂಸ್ಥೆಯ ಅಧ್ಯಕ್ಷ ಬಿ. ದಯಾನಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಹಾಗೂ ಆಯುಕ್ತ ಎಂ.ಎನ್. ಅನುಚೇತ್ ಉಪಸ್ಥಿತರಿದ್ದರು.

Author

ANU News

Follow Me
Other Articles
Previous

ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್‌ನ ತೀರ್ಪು ಬಗ್ಗೆ ಸಿದ್ದರಾಮಯ್ಯ ಅಸಮಾಧಾನ

Next

ಆಶಾ ಕಾರ್ಯಕರ್ತೆಯರ ಶಕ್ತಿಪ್ರದರ್ಶನಕ್ಕೆ ಸಾಕ್ಷಿಯಾದ ಪ್ರತಿಭಟನಾ ಸಪ್ತಾಹ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • TRAI Test Finds Jio Leads Download Speeds in Kerala’s Thrissur District
    • Bengaluru to Host FIBA Women’s Basketball League Asia 2026 from October 20
    • ‘ಪ್ರಜಾಪ್ರಭುತ್ವ ರಕ್ಷಣೆಯ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’: ರಾಹುಲ್ ಗಾಂಧಿ
    • ಪದವೀಧರ ಮತದಾರರು ಸಂವಿಧಾನಾತ್ಮಕ ಸಂಸ್ಥೆಗಳ ರಕ್ಷಣೆಗೆ ಆದ್ಯತೆ ನೀಡಲಿ: ಡಾ. ರವಿ ಸಿ.ಟಿ.
    • BJP MLC CT Ravi criticises K’taka Congress government over welfare schemes and rising costs
    Copyright 2026 — ANU News. All rights reserved. Blogsy WordPress Theme