Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆ

ಮಿನಿ ಕರ್ನಾಟಕ ಕ್ರೀಡಾಕೂಟ–2026: ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳಿಗೆ ಪರಮೇಶ್ವರ್ ಅಭಿನಂದನೆ

By ANU News
November 19, 2026 1 Min Read
Comments Off on ಮಿನಿ ಕರ್ನಾಟಕ ಕ್ರೀಡಾಕೂಟ–2026: ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳಿಗೆ ಪರಮೇಶ್ವರ್ ಅಭಿನಂದನೆ

ತುಮಕೂರು: ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಪೋಷಕರು ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ತುಮಕೂರು ಜಿಲ್ಲಾಡಳಿತ ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ (ಟುಡಾ) ವತಿಯಿಂದ ಅಮಾನಿಕೆರೆ ಆವರಣದಲ್ಲಿ ಆಯೋಜಿಸಿದ್ದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026ರಲ್ಲಿ ಭಾಗವಹಿಸಿ, ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ತುಮಕೂರು ಜಿಲ್ಲೆಯಲ್ಲಿ ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಪ್ರಯತ್ನ ನಡೆಯುತ್ತಿದೆ. ಮಕ್ಕಳಿಗೆ ಸೂಕ್ತ ತರಬೇತಿ ಒದಗಿಸಲು ರಾಜ್ಯ ಕಯಾಕಿಂಗ್ ಮತ್ತು ಕನೋಯಿಂಗ್ ಸಂಸ್ಥೆಯ ಸಹಕಾರ ಕೋರಲಾಗಿದೆ. ಈ ಕ್ರೀಡೆಗಳ ತರಬೇತಿ ಚಟುವಟಿಕೆಗಳನ್ನು ತುಮಕೂರಿಗೆ ಸ್ಥಳಾಂತರಿಸುವ ಚಿಂತನೆಯೂ ಇದೆ ಎಂದರು.

14 ವರ್ಷದೊಳಗಿನ ಮಕ್ಕಳು ಮಿನಿ ಒಲಿಂಪಿಕ್ಸ್‌ನ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕೇವಲ ಎರಡು ಸೆಕೆಂಡ್‌ಗಳ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿದರೂ ಬೆಳ್ಳಿ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಉತ್ತಮ ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕು ಎಂದು ಹೇಳಿದರು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಒಲಿಂಪಿಕ್ ಮಟ್ಟದ ಈಜು ಸ್ಪರ್ಧೆಗಳಿಗೆ ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಚಿಂತನೆಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಈಗಾಗಲೇ ಭೂಮಿ ಒದಗಿಸಲಾಗಿದೆ. ಕ್ರೀಡಾಂಗಣ ನಿರ್ಮಾಣವಾದ ಬಳಿಕ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಅವಕಾಶ ದೊರೆಯಲಿದೆ. ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣವು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಷ್ಟೇ ಉತ್ತಮ ಸೌಲಭ್ಯಗಳನ್ನು ಹೊಂದಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಕ್ರೀಡೆಯು ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ತುಮಕೂರನ್ನು ಕ್ರೀಡಾ ಚಟುವಟಿಕೆಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಅಗತ್ಯ ಮೂಲಸೌಕರ್ಯ ಮತ್ತು ತರಬೇತಿ ಸೌಲಭ್ಯ ಕಲ್ಪಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಬದ್ಧವಾಗಿವೆ ಎಂದು ಹೇಳಿದರು.

Author

ANU News

Follow Me
Other Articles
Previous

Food safety drive: Five establishments sealed in Dakshina Kannada, Udupi

Next

International Cricket Stadium Planned for Tumakuru, Says Deputy CM

Recent Posts

  • ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಬೇಡ, ಕೇಂದ್ರ ಪರಿಹಾರ ನೀಡಲಿ: ಡಾ.ಜಿ.ಪರಮೇಶ್ವರ್
  • Karnataka DCM urges Centre to release farmers’ relief, says issue should not be politicised
  • International Cricket Stadium Planned for Tumakuru, Says Deputy CM
  • ಮಿನಿ ಕರ್ನಾಟಕ ಕ್ರೀಡಾಕೂಟ–2026: ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳಿಗೆ ಪರಮೇಶ್ವರ್ ಅಭಿನಂದನೆ
  • Food safety drive: Five establishments sealed in Dakshina Kannada, Udupi
Copyright 2026 — ANU News. All rights reserved. Blogsy WordPress Theme