Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ

By ANU News
June 27, 2026 1 Min Read
0

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ಸಚಿವರು, ಕಾವೇರಿ ನದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಅಪಾಯಕಾರಿ ಪ್ರದೇಶಗಳಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸಿ, ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಗೈಡ್‌ಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ.

ನದಿಯಲ್ಲಿ ನಿಗದಿತ ಸುರಕ್ಷಿತ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮುತ್ತತ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಪ್ರವಾಸಿ ತಾಣಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಜೀವ ರಕ್ಷಣೆಗಾಗಿ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ತಕ್ಷಣ ಜಾರಿಗೆ ತರಲು ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಲು ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Author

ANU News

Follow Me
Other Articles
Previous

‘Muddu Muddu Puttalakshmi’ sets the stage for ‘Ayogya 2’ ahead of August release

Next

K’taka govt orders safety measures at Muthathi after Cauvery drowning tragedy

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
    • ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
    • DRI busts bid to import banned Pakistan goods through UAE, seizes ₹3 crore consignment
    • India Post sets up special Rakhi counters across Delhi; urges early booking for timely delivery
    • ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
    Copyright 2026 — ANU News. All rights reserved. Blogsy WordPress Theme