Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ: ಅಶೋಕ್

By ANU News
July 1, 2026 1 Min Read
0

ಬೆಂಗಳೂರು: ಮೂರು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆಂಬ ಆಡಿಯೋ ಬಿಜೆಪಿ ಪಾಳ್ಯದಲ್ಲಿ ತಳಮಳ ಸೃಷ್ಟಿಸಿದೆ. ಈ ಕುರಿತ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್, ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾವು ಏನೂ ಹೇಳಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡರು ಹೇಳಿದ್ದಾರೆ. ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯವಿಲ್ಲ. ಅದನ್ನು ವರಿಷ್ಠರು ಮಾತ್ರ ತೀರ್ಮಾನಿಸುತ್ತಾರೆ’ ಎಂದರು.

ಎಲ್ಲರ ಮನೆಯಲ್ಲಿ ದೋಸೆ ತೂತಾದರೆ ಕಾಂಗ್ರೆಸ್‌ನವರದ್ದು ಹೆಚ್ಚು ತೂತಾಗಿರುವುದರಿಂದ ಅವರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದರು.
ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕೆಂಪೇಗೌಡ ಜಯಂತಿ ವಿಚಾರದಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಅಲ್ಲಿಗೆ ಮುಕ್ತಾಯ ಮಾಡಿದ್ದು, ಆ ರೀತಿ ಯಾರೂ ಮಾತಾಡಬಾರದು ಎಂದು ಸಂದೇಶ ನೀಡಲಾಗಿದೆ ಎಂದವರು ತಿಳಿಸಿದರು. ಅವರು ಪಕ್ಷ ಮುಖ್ಯ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದು, ಇದನ್ನು ಇಲ್ಲಿಗೇ ಅಂತ್ಯ ಮಾಡುತ್ತೇವೆ ಎಂದಿದ್ದಾರೆ ಎಂದರು.

ಜಿಬಿಎ ಚುನಾವಣೆಗೆ ಸಂಬಂಧಿಸಿದ ಉಸ್ತುವಾರಿಗಳ ಸಭೆ ನಡೆಸಿ, ಎಸ್‌ಐಆರ್‌, ಅಭ್ಯರ್ಥಿ ಆಯ್ಕೆ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಜಿಬಿಎ ಚುನಾವಣೆಯನ್ನು ಕಾಂಗ್ರೆಸ್‌ ಸರ್ಕಾರ ನಡೆಸುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಬಿಜೆಪಿಯಿಂದ ಐದು ಮಹಾ ನಗರಪಾಲಿಕೆಗಳನ್ನು ಗೆಲ್ಲಬೇಕೆಂಬ ಉದ್ದೇಶದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಶೋಕ್ ತಿಳಿಸಿದರು.

ಮೂರು ವರ್ಷದಲ್ಲಿ ಬೆಂಗಳೂರಿಗೆ ಕಾಂಗ್ರೆಸ್‌ ಮಾಡಿದ ಅನ್ಯಾಯ, ರಸ್ತೆಗುಂಡಿ, ತೆರಿಗೆ ಹೆಚ್ಚಳ ಮೊದಲಾದ ಸಮಸ್ಯೆಗಳನ್ನು ತೋರಿಸಲು ಸಮಿತಿ ರಚಿಸಲಾಗುತ್ತಿದೆ. ಪ್ರಣಾಳಿಕೆ ರೂಪಿಸಲು ಕೂಡ ಸಮಿತಿ ರಚಿಸಲಾಗುತ್ತಿದೆ ಎಂದು ಅಶೋಕ್ ಹೇಳಿದರು.

Author

ANU News

Follow Me
Other Articles
Previous

ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

Next

8 charred to death as bus catches fire after crashing into truck on Delhi-Mumbai Expressway

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme