Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಯುಜಿಸಿ ಮಾನ್ಯತೆಗೆ ಏಕೀಕೃತ ಆನ್‌ಲೈನ್ ಪೋರ್ಟಲ್; ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಸುಧಾರಣೆ

By ANU News
August 6, 2026 1 Min Read
0

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (NEP)-2020ಕ್ಕೆ ಅನುಗುಣವಾಗಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ವೇಗದ ನಿಯಂತ್ರಕ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಮಾನ್ಯತೆ ಪ್ರಕ್ರಿಯೆಗಾಗಿ ಏಕೀಕೃತ ಆನ್‌ಲೈನ್ ಪೋರ್ಟಲ್ ಆರಂಭಿಸಲಾಗಿದೆ.

ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್, ಉನ್ನತ ಶಿಕ್ಷಣ ಸಂಸ್ಥೆಗಳಿಗೆ 2(f) ಮತ್ತು 12B ಮಾನ್ಯತೆ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಈ ಡಿಜಿಟಲ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹೊಸ ಪೋರ್ಟಲ್ ಮೂಲಕ ಸಂಸ್ಥೆಗಳು ಒಂದೇ ವೇದಿಕೆಯಲ್ಲಿ ಮಾನ್ಯತೆಗೆ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದ್ದು, ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಹಾಗೂ ಸಮಯದ ಉಳಿತಾಯ ಸಾಧ್ಯವಾಗಲಿದೆ.

ಇದರ ಜೊತೆಗೆ, ಕಾಲೇಜುಗಳಿಗೆ ಸ್ವಾಯತ್ತ ಸ್ಥಾನಮಾನ, ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ ಮಾನ್ಯತೆ ಹಾಗೂ ಮುಕ್ತ ಮತ್ತು ದೂರಶಿಕ್ಷಣ (ODL) ಮತ್ತು ಆನ್‌ಲೈನ್ ಶಿಕ್ಷಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಲು ಯುಜಿಸಿ ಹಲವು ಡಿಜಿಟಲ್ ವೇದಿಕೆಗಳನ್ನು ಅಭಿವೃದ್ಧಿಪಡಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರೂಪಿಸಲಾಗಿರುವ ‘ವಿಕ್ಷಿತ್ ಭಾರತ್ ಶಿಕ್ಷಾ ಅಧಿಷ್ಠಾನ ಮಸೂದೆ-2025’ ಸಾರ್ವಜನಿಕ ಸ್ವಯಂ ಬಹಿರಂಗಪಡಿಸುವಿಕೆ ಆಧಾರಿತ ತಂತ್ರಜ್ಞಾನ ಚಾಲಿತ ಏಕ-ಗವಾಕ್ಷಿ ನಿಯಂತ್ರಕ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.

ನಿಯಂತ್ರಕ ಪ್ರಕ್ರಿಯೆಗಳನ್ನು ಮತ್ತಷ್ಟು ಸರಳಗೊಳಿಸಿ, ವಿವೇಚನಾ ಅಧಿಕಾರ ಕಡಿಮೆ ಮಾಡಿ ಹಾಗೂ ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ಈ ಮಸೂದೆಯನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಗಿದೆ.

Author

ANU News

Follow Me
Other Articles
Previous

UGC moves recognition process online as Centre advances NEP-driven regulatory reforms

Next

Beware of fake universities: UGC’s latest list names 32 institutions

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • DRI busts bid to import banned Pakistan goods through UAE, seizes ₹3 crore consignment
    • India Post sets up special Rakhi counters across Delhi; urges early booking for timely delivery
    • ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
    • DRI busts illegal drug manufacturing unit in Maharashtra’s Satara; two held
    • ದೇಶದಲ್ಲಿ 32 ನಕಲಿ ವಿಶ್ವವಿದ್ಯಾಲಯಗಗಳು ಪತ್ತೆ; ಕಾನೂನು ಕ್ರಮಕ್ಕೆ ಕೇಂದ್ರದ ನಿರ್ದೇಶನ
    Copyright 2026 — ANU News. All rights reserved. Blogsy WordPress Theme