Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಯಾವಾಗ? ಸಚಿವ ಕೃಷ್ಣ ಬೈರೇಗೌಡರಿಗೆ ಆರ್.ಅಶೋಕ್ ಪ್ರಶ್ನೆ

By ANU News
June 29, 2026 1 Min Read
0

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದೇ ಯಾವಾಗ ಎಂದು ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್, ಬೆಂಗಳೂರಿನ ವಿವಿಧ ಭಾಗಗಳ ರಸ್ತೆ ಗುಂಡಿಗಳ ಫೋಟೋಗಳನ್ನು ಹಂಚಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿನಾಯಕ ಲೇಔಟ್, ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಗಂಭೀರವಾಗಿದೆ ಎಂದು ಆರೋಪಿಸಿದ್ದಾರೆ.

ಎಕ್ಸ್ ಪೋಸ್ಟ್‌ನಲ್ಲಿ ಆರ್.ಅಶೋಕ್ ಹೇಳಿದ್ದೇನು?

ರಾಜ್ಯ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ನಿರ್ಮಾಣದ ಮಾತು ಆಡುತ್ತಿದ್ದರೂ, ವಾಸ್ತವದಲ್ಲಿ ನಗರ ರಸ್ತೆಗಳನ್ನು ಗುಂಡಿಗಳಿಂದ ಮುಕ್ತಗೊಳಿಸಲು ವಿಫಲವಾಗಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ನಗರಾಭಿವೃದ್ಧಿ ಇಲಾಖೆಯ ವೈಫಲ್ಯದಿಂದ ಬೆಂಗಳೂರಿನ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕ್ಯಾಮೆರಾ ಮುಂದೆ ಅಧಿಕಾರಿಗಳನ್ನು ಗದರಿಸಿ ರೀಲ್ಸ್ ಮಾಡುವುದಕ್ಕಿಂತ ಮೊದಲು ರಸ್ತೆಗಿಳಿದು ಗುಂಡಿಗಳನ್ನು ಮುಚ್ಚಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಬೆಂಗಳೂರಿನ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದು ಯಾವಾಗ ಬೆಂಗಳೂರು ನಗರಾಭಿವೃದ್ಧಿ ಸಚಿವ @krishnabgowda ಅವರೇ?

ಬೆಂಗಳೂರಿನ ಜನತೆ ಪತ್ರಿಕೆಗೆ ಕಳುಹಿಸಿರುವ ಈ ನರಕಸದೃಶ ರಸ್ತೆಗುಂಡಿಗಳು ಫೋಟೋಗಳನ್ನು ಒಮ್ಮೆ ಕಣ್ಣು ಬಿಟ್ಟು ನೋಡಿ! ವಿನಾಯಕ ಲೇಔಟ್ ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್… ಹೀಗೆ ರಾಜಧಾನಿಯ ಪ್ರತಿ… pic.twitter.com/1OAnr6eFOn

— R. Ashoka (@RAshokaBJP) June 29, 2026

Author

ANU News

Follow Me
Other Articles
Previous

ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

Next

When will there be reels on potholes? R. Ashok questions Minister Krishna Byre Gowda

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್
    • ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
    • Ladakh body warns of intensified agitation if Centre fails to make ‘clear progress
    • Civic apathy won’t be tolerated, says Krishna Byre Gowda during surprise Bengaluru inspectio
    • ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
    Copyright 2026 — ANU News. All rights reserved. Blogsy WordPress Theme