Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ

By Anu News
June 19, 2026 1 Min Read
0

ಬೆಂಗಳೂರು: ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಮನಿವಣ್ಣನ್ ಪಿ. ಅವರಿಗೆ ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (ಡಲ್ಟ್) ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ನವದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಡಾ. ಪ್ರಸಾದ್ ಎನ್.ವಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನವದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ.

ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ.ಬಿ. ಹಾಗೂ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ರಘುನಂದನ್ ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಡಾ. ರಾಮ ಪ್ರಸಾತ್ ಮನೋಹರ್ ವಿ. ಅವರಿಗೆ ಪ್ರವಾಸೋದ್ಯಮ ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಕೃಷಿ ಇಲಾಖೆಯ ಆಯುಕ್ತರಾಗಿ ಡಾ. ಸತೀಶ ಬಿ.ಸಿ. ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಹಾಗೂ ಆರೋಗ್ಯ ನಿರ್ದೇಶನಾಲಯದ ಮಿಷನ್ ನಿರ್ದೇಶಕರಾಗಿ ಅಕ್ರಮ್ ಪಾಶಾ ನೇಮಕಗೊಂಡಿದ್ದಾರೆ.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ನಿರ್ದೇಶಕರಾಗಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಳೆ ಅವರನ್ನು ನೇಮಕ ಮಾಡಲಾಗಿದೆ.

Author

Anu News

Follow Me
Other Articles
Previous

‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ

Next

ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Yash, Rishab Shetty, Rakshit Shetty among Sandalwood stars set to add glamour to Mysuru Dasara
    • Karnataka to move SC over Centre withholding ₹2,186 crore in panchayat grants
    • ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
    • ಹಾರ್ಮುಜ್‌ನಲ್ಲಿ ಇರಾನ್‌ ರಣಕಹಳೆ: 20ಕ್ಕೂ ಹೆಚ್ಚು ಹಡಗುಗಳಿಗೆ ಗುರಿ!
    • Iran expands Hormuz no-go zone as tensions rise, oil prices cross $100
    Copyright 2026 — ANU News. All rights reserved. Blogsy WordPress Theme