Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

By ANU News
July 6, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆಯ ಸಾಧ್ಯತೆ ಇರುವ ಜಿಲ್ಲೆಗಳ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

Author

ANU News

Follow Me
Other Articles
Previous

ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್

Next

ಮಹಿಳಾ ಟಿ20 ವಿಶ್ವಕಪ್ ; 7ನೇ ಬಾರಿ ಟ್ರೋಫಿ ಗೆದ್ದ ಚಾಂಪಿಯನ್ ಆಸ್ಟ್ರೇಲಿಯಾ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಎಸ್‌ಐಆರ್‌ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
    • ಆಗಸ್ಟ್‌ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
    • DRI busts bid to import banned Pakistan goods through UAE, seizes ₹3 crore consignment
    • India Post sets up special Rakhi counters across Delhi; urges early booking for timely delivery
    • ಸತಾರಾದಲ್ಲಿ ಭಾರಿ ಕಾರ್ಯಾಚರಣೆ; ಅಕ್ರಮ ಡ್ರಗ್ಸ್ ತಯಾರಿಕಾ ಘಟಕ ಭೇದಿಸಿದ ಡಿಆರ್‌ಐ
    Copyright 2026 — ANU News. All rights reserved. Blogsy WordPress Theme