Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

By ANU News
July 28, 2026 1 Min Read
0

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ನಡುವೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರು, ರೈತರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Author

ANU News

Follow Me
Other Articles
Previous

ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

Next

IMD issues orange alert for Karnataka coast; heavy rain likely till July 30

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme