Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

By ANU News
June 22, 2026 1 Min Read
0

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಜೊತೆಗೆ ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ನೊಂದೆಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Author

ANU News

Follow Me
Other Articles
Previous

ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ

Next

ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್
    • ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ
    • Ladakh body warns of intensified agitation if Centre fails to make ‘clear progress
    • Civic apathy won’t be tolerated, says Krishna Byre Gowda during surprise Bengaluru inspectio
    • ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ
    Copyright 2026 — ANU News. All rights reserved. Blogsy WordPress Theme