Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

By ANU News
July 20, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ಕೇವಲ 40% ನೀರು ಸಂಗ್ರಹವಿದ್ದು, ಸದ್ಯಕ್ಕೆ ಅದನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಅಣೆಕಟ್ಟುಗಳಿಗೆ ಸಮರ್ಪಕ ನೀರು ಬಂದ ಬಳಿಕವೇ ನೀರು ಬಿಡುಗಡೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ 23%ಕ್ಕೆ ಕುಸಿದಿದೆ. 3,817 ಸಣ್ಣ ನೀರಾವರಿ ಕೆರೆಗಳ ಪೈಕಿ 3,235 ಕೆರೆಗಳಲ್ಲಿ ಹಾಗೂ 32,504 ಜಿಲ್ಲಾ ಪಂಚಾಯಿತಿ ಕೆರೆಗಳ ಪೈಕಿ 27,450 ಕೆರೆಗಳಲ್ಲಿ ಶೇ.50ಕ್ಕಿಂತ ಕಡಿಮೆ ನೀರಿದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಘೋಷಿಸಲಾಗಿದ್ದು, ಈಗಾಗಲೇ ₹379 ಕೋಟಿ ಬಿಡುಗಡೆ ಮಾಡಲಾಗಿದೆ. ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಮೇವು, ಗೊಬ್ಬರ ಪೂರೈಕೆ, ಕೊಳವೆಬಾವಿ ಕಾಮಗಾರಿಗಳಲ್ಲಿ ಪಾರದರ್ಶಕತೆ ಹಾಗೂ ಬೆಳೆ ವಿಮೆ ಸಂಬಂಧಿತ ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಶಿವಕುಮಾರ್ ಹೇಳಿದರು.

Author

ANU News

Follow Me
Other Articles
Previous

Spain edge Argentina in extra time to lift second FIFA World Cup title

Next

Karnataka stares at drought as 20 taluks receive almost no rain

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Rescue operation intensifies after Sikkim tunnel disaster; toxic gas hampers efforts
    • ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    • Siddaramaiah seeks Dharmendra Pradhan’s removal over NEET row, slams police action
    • ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
    • ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ
    Copyright 2026 — ANU News. All rights reserved. Blogsy WordPress Theme