Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶಪ್ರಾದೇಶಿಕ

ರಾಜ್ಯಸಭೆಗೆ ದೇವೇಗೌಡ ಮರುಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

By ANU News
May 23, 2026 1 Min Read
0

ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು ಜೋರಾಗಿವೆ.

ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ, ಒಬ್ಬ ಅಭ್ಯರ್ಥಿ ಗೆಲ್ಲಲು ಕನಿಷ್ಠ 45 ರಿಂದ 46 ಮತಗಳ ಅಗತ್ಯವಿದೆ. ಕಾಂಗ್ರೆಸ್ ಬಳಿ 136 ಶಾಸಕರ ಬಲವಿದ್ದು, ಪಕ್ಷವು ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸ್ಥಿತಿಯಲ್ಲಿದೆ.

ಇನ್ನೊಂದೆಡೆ ಬಿಜೆಪಿ ಬಳಿ 63 ಹಾಗೂ ಜೆಡಿಎಸ್ ಬಳಿ 18 ಶಾಸಕರಿದ್ದು, ಮೈತ್ರಿಕೂಟದ ಒಟ್ಟು ಬಲ 81ಕ್ಕೆ ತಲುಪುತ್ತದೆ. ಹೀಗಾಗಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ. ದೇವೇಗೌಡರನ್ನು ಕಣಕ್ಕಿಳಿಸಿದರೆ ಅವರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ.

ದೇವೇಗೌಡರ ರಾಜಕೀಯ ಅನುಭವ, ಹಿರಿತನ ಮತ್ತು ರಾಷ್ಟ್ರೀಯ ಮಟ್ಟದ ಪ್ರಭಾವವನ್ನು ಪರಿಗಣಿಸಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ಜೆಡಿಎಸ್ ವಲಯದಲ್ಲಿ ವ್ಯಕ್ತವಾಗಿದೆ. ಈ ಸಂಬಂಧ ಜೆಡಿಎಸ್ ನಾಯಕರು ಈಗಾಗಲೇ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ಆರಂಭಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ದೇವೇಗೌಡರ ರಾಜ್ಯಸಭೆ ಮರು ಆಯ್ಕೆ ಕುರಿತ ಅಂತಿಮ ತೀರ್ಮಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಯಾವುದೇ ಷರತ್ತು ಅಥವಾ ಒತ್ತಡ ಹೇರದೆ, ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಪಕ್ಷ ಬದ್ಧವಾಗಿರುತ್ತದೆ ಎಂಬ ಸಂದೇಶವನ್ನು ಜೆಡಿಎಸ್ ನೀಡಿದೆ.

Author

ANU News

Follow Me
Other Articles
Previous

‘ಖೇತ್ ಬಚಾವೋ ಅಭಿಯಾನ’ದ ಮೂಲಕ 2.71 ಕೋಟಿ ಜನರಿಗೆ ತಲುಪಿದ ಐಸಿಎಆರ್

Next

ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme