Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ

By ANU News
July 14, 2026 1 Min Read
0

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ಸೂಚಿಸಿದ್ದಾರೆ.

ಶೋಕ ಸಂದೇಶದಲ್ಲಿ ಮಾತನಾಡಿರುವ ಅವರು, ರಾಮಚಂದ್ರ ಗೌಡರು ನಿಷ್ಠಾವಂತ ಆರ್‌ಎಸ್‌ಎಸ್‌ ಸ್ವಯಂಸೇವಕರಾಗಿದ್ದು, ಬೆಂಗಳೂರು ನಗರ ಪಾಲಿಕೆ ಸದಸ್ಯರಾಗಿ ನಗರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಿಂದ ಹಲವು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿಬೆಳೆಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ.

“ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ಕರುಣಿಸಲಿ” ಎಂದು ವಿ. ಸೋಮಣ್ಣ ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

Author

ANU News

Follow Me
Other Articles
Previous

Former Karnataka Minister Ramachandra Gowda Passes Away at 88

Next

Monsoon Weakens in Rajasthan; Dry Spell Likely for Another Week

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Mysuru Ganapathy Sachchidananda Ashram hosts grand Chaturmasya celebrations of Datta Vijayananda Teertha
    • ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ
    • ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ
    • Grandmothers’ Day at Hanur school celebrates special bond between grandparents and grandchildren
    • ‘Annabrahma Chaturmasya’ in Gokarna: Mind, ‘ojas’ vital to keep body functioning, says Raghaveshwara Sri
    Copyright 2026 — ANU News. All rights reserved. Blogsy WordPress Theme