Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

By ANU News
July 2, 2026 1 Min Read
0

ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದೆ.

ಮಂಗಳವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದು ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ.

ಹಿಟಾಚಿ ಯಂತ್ರದ ಮೂಲಕ ಕಲ್ಲು ತೆಗೆಯುವ ಕಾಮಗಾರಿ ನಡೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕ್ವಾರಿಯಲ್ಲಿ ಬಿಹಾರ ಮೂಲದ 10ರಿಂದ 15 ಕಾರ್ಮಿಕರು ಹಾಗೂ 2ರಿಂದ 3 ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಐವರು ಕಾರ್ಮಿಕರನ್ನು ತಕ್ಷಣವೇ ರಾಮನಗರದ ಆರ್.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

Author

ANU News

Follow Me
Other Articles
Previous

‘What does caste certificate have to do with free electricity?’: JD(S) targets Karnataka govt over Gruha Jyothi verification

Next

Seven Killed, Five Injured in Stone Quarry Collapse in Bengaluru South

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ
    • Trump predicts US-Iran war will end ‘immediately’ after November midterm polls
    • ‘People’s trust is bigger than power’: DK Shivakumar marks 100 days as CM
    • ಅಧಿಕಾರಕ್ಕಿಂತ ಜನರ ನಂಬಿಕೆ ದೊಡ್ಡದು: ಸಿಎಂ ಆಗಿ 100 ದಿನ ಪೂರೈಸಿದ ಡಿಕೆಶಿ
    • Raanbali teaser: Vijay Deverakonda, Rashmika Mandanna film takes on British-era oppression
    Copyright 2026 — ANU News. All rights reserved. Blogsy WordPress Theme