Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಹುಲ್ ಗಾಂಧಿ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

By ANU News
July 21, 2026 1 Min Read
0

ಬೆಂಗಳೂರು: ದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಮತ್ತು ವಿರೋಧ ಪಕ್ಷದ ನಾಯಕರ ಬಂಧನವನ್ನು ಖಂಡಿಸಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಎಂ. ನಾರಾಯಣಸ್ವಾಮಿ, ವಿ.ಎಸ್. ಆರಾಧ್ಯ, ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್, ಎಂ. ರಾಮಚಂದ್ರಪ್ಪ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆ ವೇಳೆ ಪೊಲೀಸರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

Author

ANU News

Follow Me
Other Articles
Previous

‘Chalo Sansad’ march over NEET paper leak halted in Delhi; protesters, police clash

Next

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
    • Sugar prices spark political row: Kharge questions Centre, govt rejects ethanol link
    • 3. Pellet gun case: Priyank Kharge questions delay in filing FIR
    • ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
    • ‘Phoenix’ film row: Om Prakash Rao accused of not returning ₹3.85 crore
    Copyright 2026 — ANU News. All rights reserved. Blogsy WordPress Theme