Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

By ANU News
August 28, 2026 1 Min Read
0

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿದ್ದ ಹೋರಾಟದ ನಡುವೆಯೇ ಈ ಬೆಳವಣಿಗೆ ನಡೆದಿದೆ.

ದೆಹಲಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಗೇಂದ್ರ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಭಾವುಕರಾಗಿ ಕಣ್ಣೀರಿಟ್ಟರು. ಇದೇ ವೇಳೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿ, ಬಿಜೆಪಿಗೆ ಜನತಾ ನ್ಯಾಯಾಲಯಕ್ಕೆ ಬರುವಂತೆ ಸವಾಲು ಹಾಕಿದರು.

ತಮ್ಮ ವಿರುದ್ಧ ‘ಮನುವಾದಿಗಳ ಕುತಂತ್ರ’ದಿಂದ ಪ್ರಕರಣ ದಾಖಲಿಸಿ ಮೂರು ತಿಂಗಳು ಜೈಲಿಗೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ ಅವರು, ತಾನು ದಲಿತ ಎಂಬ ಕಾರಣಕ್ಕೆ ಗುರಿಯಾಗಿಸಲಾಗಿದೆ ಎಂದು ದೂರಿದರು. “ಮನುವಾದಿಗಳ ಕುತಂತ್ರಕ್ಕೆ ಬಗ್ಗುವುದಿಲ್ಲ. ಸಂವಿಧಾನಕ್ಕೆ ತಲೆಬಾಗುತ್ತೇನೆ” ಎಂದು ಹೇಳಿದರು.

ವಿಪಕ್ಷಗಳು ಸದನದಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಚರ್ಚೆಗೆ ಬರಲಿಲ್ಲ. ಇದೀಗ ವಿಚಾರವಿಲ್ಲದ ವಿಷಯವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಳ್ಳಾರಿಯ ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧವೂ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ತಾಕತ್ತಿದ್ದರೆ ಅಖಾಡಕ್ಕೆ ಬನ್ನಿ. ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು.

ಇಡಿ, ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳ ಮೂಲಕ ಬೆದರಿಸಲು ಪ್ರಯತ್ನಿಸಲಾಗುತ್ತಿದೆ. ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಅವರು ಹೇಳಿದರು.

ವಾಲ್ಮೀಕಿ ನಿಗಮದ ಹಗರಣ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಜೂನ್ 6, 2024ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಆಗಸ್ಟ್ 3, 2026ರಂದು ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಆದರೆ ಮರುನೇಮಕಾತಿಗೆ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ವಿಧಾನಮಂಡಲ ಅಧಿವೇಶನದಲ್ಲೂ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಹೋರಾಟ ನಡೆಸಿದ್ದವು. ಇದೀಗ ಮತ್ತೆ ಸಚಿವ ಸ್ಥಾನ ತೊರೆದಿರುವುದರಿಂದ ಒಂದೇ ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಎರಡನೇ ಬಾರಿ ಸಚಿವ ಸ್ಥಾನ ಕಳೆದುಕೊಂಡಂತಾಗಿದೆ.

Author

ANU News

Follow Me
Other Articles
Previous

ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

Next

B Nagendra quits Karnataka cabinet, challenges BJP leaders to ‘people’s court’

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka road crash: 3-year-old child among four killed in Chikkanayakanahalli
    • St Mary’s Shrine Basilica in Shivajinagar to celebrate annual novena, feast from Aug 29
    • ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು
    • B Nagendra quits Karnataka cabinet, challenges BJP leaders to ‘people’s court’
    • ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು
    Copyright 2026 — ANU News. All rights reserved. Blogsy WordPress Theme