Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

By Anu News
June 9, 2026 1 Min Read
0

ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಗುರುತಿಸಿಕೊಂಡಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ಸುನೀಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿಯೂ ಕನುಗೋಳು ಅವರು ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನ ‘ಪೇಸಿಎಂ’ ಅಭಿಯಾನ, ಗ್ಯಾರಂಟಿ ಯೋಜನೆಗಳ ಪ್ರಚಾರ ತಂತ್ರ ಹಾಗೂ ಪಕ್ಷದ ಚುನಾವಣಾ ಕಾರ್ಯತಂತ್ರ ರೂಪಿಸುವಲ್ಲಿ ಸುನೀಲ್ ಕನುಗೋಳು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.

ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದ ಅವರು, ಇದೀಗ ಆಡಳಿತಾತ್ಮಕ ವಿಚಾರಗಳಲ್ಲಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Author

Anu News

Follow Me
Other Articles
Previous

ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

Next

ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme