Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

By ANU News
August 1, 2026 1 Min Read
0

ಬೆಂಗಳೂರು: ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಶನಿವಾರ ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಈ ಅಭಿಯಾನದಡಿ ಕಟ್ಟಡ ನಿರ್ಮಾಣ ತ್ಯಾಜ್ಯ, ಘನ ತ್ಯಾಜ್ಯ, ಹಳೆಯ ವಿದ್ಯುತ್ ಕಂಬಗಳು, ಪೈಪ್‌ಗಳು, ಮಣ್ಣಿನ ಗುಡ್ಡೆಗಳು, ಬೆಳೆದು ನಿಂತ ಕಳೆಗಿಡಗಳು ಹಾಗೂ ಮರದ ಕೊಂಬೆಗಳು ಸೇರಿದಂತೆ ಒಟ್ಟು 22,372 ಟನ್‌ಗಳಷ್ಟು ತ್ಯಾಜ್ಯವನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ಅಭಿಯಾನದ ಮೂಲಕ ನಗರದ ಸ್ವಚ್ಛತೆ, ಸೌಂದರ್ಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಬೆಂಗಳೂರು ನಗರವನ್ನು ತ್ಯಾಜ್ಯ ಮುಕ್ತ ಹಾಗೂ ಮಾದರಿ ಮಹಾನಗರವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದವರು ತಿಳಿಸಿದರು.

ಈ ವೇಳೆ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಇಂಧನ ಸಚಿವರಾದಕೆ.ಜೆ ಜಾರ್ಜ್‌, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಎಸ್‌.ಆರ್‌ ವಿಶ್ವನಾಥ್‌ ಹಾಗೂ ಎ.ಸಿ ಶ್ರೀನಿವಾಸ್‌, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್‌ ರಾವ್‌, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್‌ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Strong earthquake strikes Aomori in northern Japan

Next

Bengaluru begins ‘Freedom from Waste’ drive; 22,372 tonnes of waste to be cleared

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme