Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ

By ANU News
August 14, 2026 1 Min Read
0

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ.

ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಲಭಿಸಿದೆ. ಪುರಸ್ಕೃತರಲ್ಲಿ ರೈಲ್ವೇಸ್ ಬೆಂಗಳೂರು ಎಸ್ಪಿ ಸಾರಾ ಫಾತಿಮಾ, ಕೆಎಸ್‌ಆರ್‌ಪಿ ಕಮಾಂಡೆಂಟ್ ಥಾಮಸ್ ಮ್ಯಾಥ್ಯೂ, ಆಗ್ನೇಯ ಸಂಚಾರ ವಿಭಾಗದ ಎಸಿಪಿ ಮಹಾದೇವ್, ರಾಯಚೂರು ಡಿಎಆರ್‌ನ ಡಿವೈಎಸ್ಪಿ ಪರಮಾನಂದ್ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದಾರೆ.

ಪೊಲೀಸ್ ತರಬೇತಿ ಶಾಲೆ ಮೈಸೂರು, ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ, ಸಿಐಡಿ, ರಾಜಭವನ, ಕೆಪಿ ಅಗ್ರಹಾರ ಪೊಲೀಸ್ ಠಾಣೆ, ಕೆಎಸ್‌ಆರ್‌ಪಿ, ವಿಧಾನಸೌಧ ಭದ್ರತೆ, ಡಿಸಿಆರ್‌ಇ ಕೆಜಿಎಫ್, ತರೀಕೆರೆ ಹಾಗೂ ಹುಣಸೂರು ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪದಕ ಘೋಷಿಸಲಾಗಿದೆ.

ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿರುವ ಬೆಂಗಳೂರು ಸಿಸಿಬಿಯ ಸಹಾಯಕ ಪೊಲೀಸ್ ಆಯುಕ್ತ ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವ ಲಭಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಣೆಯಾಗಿರುವ ಈ ಪದಕಗಳು ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಹಾಗೂ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸೇವೆಗೆ ನೀಡಿರುವ ಗೌರವವಾಗಿದೆ.

Author

ANU News

Follow Me
Other Articles
Previous

ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

Next

17 Karnataka Police Personnel Receive President’s Police Medals on Independence Day

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 1,057 ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗೆ ಶೌರ್ಯ, ಸೇವಾ ಪದಕ
    • 301 gallantry medals among 1,057 awards for police, fire and security personnel
    • Karnataka public property bill row: Kharge rejects BJP’s RSS-targeting charge
    • ಸರ್ಕಾರಿ ಆಸ್ತಿ ಬಳಕೆ ನಿಯಂತ್ರಣ ಮಸೂದೆ; ‘ಆರ್‌ಎಸ್‌ಎಸ್‌ ಉಲ್ಲೇಖವೇ ಇಲ್ಲ’ ಎಂದ ಪ್ರಿಯಾಂಕ್ ಖರ್ಗೆ
    • Hanur’s Manasa Educational Institution marks 30 years with mega job fair on August 22
    Copyright 2026 — ANU News. All rights reserved. Blogsy WordPress Theme