
ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ. ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬೆನ್ನಲ್ಲೇ, ಬಿಜೆಪಿ ನಿಯೋಗವೂ ಆಯೋಗಕ್ಕೆ ಪ್ರತ್ಯೇಕ ಮನವಿ ಸಲ್ಲಿಸಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಿಯಮಾನುಸಾರ ಮನೆ ಮನೆಗೆ ತೆರಳಿ ನಡೆಸಬೇಕಾದರೂ, ಕೆಲವು ಕಡೆಗಳಲ್ಲಿ ಮಸೀದಿಗಳಲ್ಲಿ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ.
“ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅದು ಯಾವುದೇ ರಾಜಕೀಯ ಹಿತಾಸಕ್ತಿಯ ಸಾಧನವಾಗಬಾರದು. ನಿಯಮಗಳನ್ನು ಉಲ್ಲಂಘಿಸಿ ಪ್ರಕ್ರಿಯೆ ನಡೆಸುತ್ತಿರುವ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಬಿಜೆಪಿ ಆಗ್ರಹಿಸಿದೆ.
ಇದೇ ವೇಳೆ, ಅಕ್ರಮ ವಲಸಿಗರು ಮತ್ತು ನುಸುಳುಕೋರರಿಗೆ ಕಾಂಗ್ರೆಸ್ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿರುವ ಪಕ್ಷ, ಈ ವಿಚಾರವನ್ನು ರಾಜ್ಯದ ಜನತೆ ಗಂಭೀರವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದೆ.
ನಿಯಮ ಬಾಹಿರವಾಗಿ ಮಸೀದಿಗಳಲ್ಲಿ SIR ಪರಿಷ್ಕರಣೆ!
ಮನೆ ಮನೆಗೆ ತೆರಳಿ ನಡೆಸಬೇಕಾದ SIR ಪ್ರಕ್ರಿಯೆಯನ್ನು ಬಿಟ್ಟು, ನಿಯಮ ಉಲ್ಲಂಘಿಸಿ ಮಸೀದಿಗಳಲ್ಲಿ ಪರಿಷ್ಕರಣೆ ನಡೆಸುತ್ತಿರುವುದೇಕೆ? ಅಕ್ರಮ ಬ್ರದರ್ಸ್‌ಗಳನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಅಧಿಕಾರ ದುರ್ಬಳಕೆ ಮಾಡಿಕೊಂಡು ವಾಮಮಾರ್ಗ ಹಿಡಿದಿರುವುದು ಬಯಲಾಗಿದೆ.
ಪ್ರಜಾಪ್ರಭುತ್ವದಲ್ಲಿ… pic.twitter.com/Jeloe9oQUb
— BJP Karnataka (@BJP4Karnataka) July 5, 2026