Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ವಿದೇಶ

ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

By Anu News
June 15, 2026 1 Min Read
0

ವಾಷಿಂಗ್ಟನ್: ಜೂನ್ 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಶಾಂತಿ ಒಪ್ಪಂದಕ್ಕೆ ಅಧಿಕೃತ ಸಹಿ ಹಾಕುವ ಕಾರ್ಯಕ್ರಮ ನಿಗದಿಯಾಗಿದೆ. ಜಾಗತಿಕ ಮಟ್ಟದಲ್ಲಿ ಕುತೂಹಲ ಕೆರಳಿಸಿರುವ ಈ ಬೆಳವಣಿಗೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಮೂಡಿಸಿದೆ.

ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಗೆ ತೀವ್ರ ಆತಂಕ ಉಂಟುಮಾಡಿದ್ದ ಅಮೆರಿಕ-ಇರಾನ್ ಸಂಘರ್ಷಕ್ಕೆ ಅಂತ್ಯ ಹಾಡುವ ಮಹತ್ವದ ಬೆಳವಣಿಗೆ ನಡೆದಿದೆ. ಕಳೆದ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಯುದ್ಧ ಹಾಗೂ ರಾಜತಾಂತ್ರಿಕ ಹಗ್ಗಜಗ್ಗಾಟದ ಬಳಿಕ ಉಭಯ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ತಮ್ಮ ‘ಟ್ರೂತ್ ಸೋಷಿಯಲ್’ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಇರಾನ್ ಜೊತೆಗಿನ ಒಪ್ಪಂದ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು. ಹೊರ್ಮುಝ್ ಜಲಸಂಧಿಯನ್ನು ಟೋಲ್-ಮುಕ್ತವಾಗಿ ತೆರೆಯಲು ಹಾಗೂ ಅಮೆರಿಕ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣದಿಂದಲೇ ಹಿಂತೆಗೆದುಕೊಳ್ಳಲು ಆದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಫೆಬ್ರವರಿ 28ರಿಂದ ಆರಂಭವಾಗಿದ್ದ ಸಂಘರ್ಷದ ಪರಿಣಾಮವಾಗಿ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೊರ್ಮುಝ್ ಜಲಸಂಧಿಯಲ್ಲಿ ನಿರ್ಬಂಧ ಉಂಟಾಗಿತ್ತು. ಇದೀಗ ಒಪ್ಪಂದದ ಬೆನ್ನಲ್ಲೇ ಜಲಸಂಧಿಯನ್ನು ಪುನಃ ಮುಕ್ತಗೊಳಿಸಲಾಗುತ್ತಿದೆ ಎಂದು ವರದಿಯಾಗಿದೆ. ಇದರಿಂದ ಜಾಗತಿಕ ತೈಲ ಸರಬರಾಜು ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಚೈತನ್ಯ ಸಿಗುವ ನಿರೀಕ್ಷೆ ಮೂಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಇರಾನ್, ಒಪ್ಪಂದವನ್ನು ದೃಢಪಡಿಸಿದ್ದು, “ಇದು ಸಂಪೂರ್ಣ ನಂಬಿಕೆಯ ಒಪ್ಪಂದವಲ್ಲ. ಅಮೆರಿಕದ ಬದ್ಧತೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತೇವೆ” ಎಂದು ಹೇಳಿದೆ. ಮುಂದಿನ 60 ದಿನಗಳ ಕದನ ವಿರಾಮ ಅವಧಿಯಲ್ಲಿ ಅಂತಿಮ ಮಾತುಕತೆಗಳು ಮುಂದುವರಿಯಲಿವೆ ಎಂದು ತಿಳಿಸಿದೆ.

ಈ ಸಂಘರ್ಷವನ್ನು ಶಮನಗೊಳಿಸಲು ಪಾಕಿಸ್ತಾನ ಮಹತ್ವದ ಮಧ್ಯಸ್ಥಿಕೆ ವಹಿಸಿದೆ ಎನ್ನಲಾಗಿದೆ. ಲೆಬನಾನ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿದ್ದ ಮಿಲಿಟರಿ ಕಾರ್ಯಾಚರಣೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.

Author

Anu News

Follow Me
Other Articles
Previous

ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

Next

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘418’ Trailer Out: Prashanth Neel-Presented Horror Film to Hit Theatres on October 23
    • ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿರುವ ‘418’ ಟ್ರೈಲರ್ ಬಿಡುಗಡೆ; ಅ.23ಕ್ಕೆ ಹಾರರ್ ಸಿನಿಮಾ ತೆರೆಗೆ
    • ‘Nation before self’: The RSS message behind its Vijayadashami celebrations
    • India-Australia defence ties get a boost as Austrahind 2026 begins in Kerala
    • Indian Navy to Showcase Indigenous Defence Technologies at Swavlamban 2026
    Copyright 2026 — ANU News. All rights reserved. Blogsy WordPress Theme