Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

By ANU News
May 15, 2026 1 Min Read
0

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೆ ಬಳಿಕ ಇಂಧನ ದರ ಏರಿಕೆ ಆಗುತ್ತದೆ ಎಂದು ನಾವು ಮೊದಲೇ ಹೇಳಿದ್ದೆವು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ” ಎಂದು ಆರೋಪಿಸಿದರು.

“ದರ ಏರಿಕೆಯ ಪರಿಣಾಮ ಸಾಮಾನ್ಯ ಜನರ ಜೀವನದ ಮೇಲೆ ಬೀಳಲಿದೆ. ರೈತರು, ಕಾರ್ಮಿಕರು ಹಾಗೂ ಬಡವರು ಹೆಚ್ಚು ಸಂಕಷ್ಟ ಅನುಭವಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಮಾತ್ರವಲ್ಲದೆ ಅಗತ್ಯ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುತ್ತದೆ” ಎಂದರು.

ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯನ್ನೂ ಉಲ್ಲೇಖಿಸಿದ ಸಿದ್ದರಾಮಯ್ಯ, “ಬಿಜೆಪಿ ಅಧಿಕಾರಕ್ಕೆ ಬಂದಾಗ ಗ್ಯಾಸ್ ಸಿಲಿಂಡರ್ ದರ ಸುಮಾರು ₹413 ಇತ್ತು. ಈಗ ಅದು ₹1000 ದಾಟಿದೆ. ಇದರಿಂದ ಜನರ ಜೀವನ ಮತ್ತಷ್ಟು ಕಷ್ಟಕರವಾಗಿದೆ” ಎಂದು ಟೀಕಿಸಿದರು.

“ಈ ಸಂದರ್ಭದಲ್ಲಿ ಇಂಧನ ದರ ಹೆಚ್ಚಿಸಲು ಯಾವುದೇ ಸಮರ್ಥನೆ ಇಲ್ಲ. ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಇದೇ ವೇಳೆ, ನೀಟ್ ಪರೀಕ್ಷೆ ನಿರ್ವಹಣೆಯಲ್ಲೂ ಕೇಂದ್ರ ವಿಫಲವಾಗಿದೆ ಎಂದು ಆರೋಪಿಸಿದ ಅವರು, “ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾದ ಅನಿಶ್ಚಿತತೆ ಎದುರಿಸುತ್ತಿದ್ದಾರೆ” ಎಂದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಲ್ಲೂ ಶೀಘ್ರ ಆರಂಭವಾಗಲಿದ್ದು, ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Author

ANU News

Follow Me
Other Articles
Previous

‘ಭೋಜಶಾಲಾ ದೇವಾಲಯದಲ್ಲಿ ಪೂಜೆ ಹಿಂದೂಗಳ ಹಕ್ಕು’: ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು

Next

ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme