Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್

By ANU News
August 19, 2026 1 Min Read
0

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಮತ್ತಷ್ಟು ಚುರುಕಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೀನುಗಾರರು ಹಾಗೂ ಕರಾವಳಿ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಕೂಡ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಧಾರವಾಡ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಗದಗ ಜಿಲ್ಲೆಯ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Author

ANU News

Follow Me
Other Articles
Previous

Former minister B.C. Nagesh no more; leaders condole death

Next

Heavy rain likely in coastal Karnataka, Malnad districts; yellow alert issued

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Trump hints at halting Iran talks; US steps up economic pressure
    • ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ
    • Bengaluru South fake drug racket may have nationwide links; Khader seeks high-level probe
    • ಬೆಂಗಳೂರು ದಕ್ಷಿಣದ ನಕಲಿ ಔಷಧಿ ಜಾಲಕ್ಕೆ ದೇಶವ್ಯಾಪಿ ಸಂಪರ್ಕ? ಉನ್ನತ ಮಟ್ಟದ ತನಿಖೆ ಸಾಧ್ಯತೆ
    • ₹187 crore case: BJP demands Nagendra’s resignation, rejects CID clean chit
    Copyright 2026 — ANU News. All rights reserved. Blogsy WordPress Theme