Skip to content
ANU News
ANU News
  • Home
  • Home
ANU News
ANU News
  • Home
  • Home
Others

ಕರ್ನಾಟಕದಲ್ಲಿ ಮುಂಗಾರು ಅಬ್ಬರ; ಮುಂದಿನ ಎರಡು ದಿನ ರೆಡ್ ಅಲರ್ಟ್

By Anu News
June 8, 2026 1 Min Read
0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಹವಾಮಾನ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ.

ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಜೂನ್ 9ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹಾಗೂ ಜೂನ್ 10ರಂದು ರಾಜ್ಯದಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಭಾರೀ ಮಳೆ, ಗಾಳಿಯ ವೇಗ ಹೆಚ್ಚಳ ಮತ್ತು ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.

ಜೂನ್ 9ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲಾಗಿದೆ. ಅಗತ್ಯವಿರುವ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ನದಿ, ಹಳ್ಳ–ಕೊಳ್ಳಗಳ ಸಮೀಪ ವಾಸಿಸುವ ಜನರು ಎಚ್ಚರಿಕೆ ವಹಿಸುವಂತೆ ಹಾಗೂ ಅನಗತ್ಯವಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Author

Anu News

Follow Me
Other Articles
Previous

ಸೂರಜ್ ಹೆಗ್ಡೆ ನಿಧನಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

Next

ಜೂನ್ 18ರಿಂದ ತಮಿಳುನಾಡು ವಿಧಾನಸಭೆ ಅಧಿವೇಶನ; ವಿಜಯ್ ಸರ್ಕಾರಕ್ಕೆ ಅಗ್ನಿಪರೀಕ್ಷೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ; ತಮಿಳುನಾಡು–ಕರ್ನಾಟಕದಲ್ಲಿ ಹೈ ಅಲರ್ಟ್
    • ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಆರೋಪ ತಳ್ಳಿ ಹಾಕಿದ ಟ್ರಸ್ಟ್
    • ಜೂನ್ 18ರಿಂದ ತಮಿಳುನಾಡು ವಿಧಾನಸಭೆ ಅಧಿವೇಶನ; ವಿಜಯ್ ಸರ್ಕಾರಕ್ಕೆ ಅಗ್ನಿಪರೀಕ್ಷೆ
    • ಕರ್ನಾಟಕದಲ್ಲಿ ಮುಂಗಾರು ಅಬ್ಬರ; ಮುಂದಿನ ಎರಡು ದಿನ ರೆಡ್ ಅಲರ್ಟ್
    • ಸೂರಜ್ ಹೆಗ್ಡೆ ನಿಧನಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ
    Copyright 2026 — ANU News. All rights reserved. Blogsy WordPress Theme