Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶ

ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

By ANU News
June 25, 2026 1 Min Read
0

ನವದೆಹಲಿ: ಹವಾಮಾನ ವೈಪರೀತ್ಯ ಮತ್ತು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಮಾವು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಈ ಕುರಿತು ಮಾಹಿತಿ ನೀಡಿರುವ ಕುಮಾರಸ್ವಾಮಿ, “ನನ್ನ ಮನವಿಗೆ ಕೇಂದ್ರ ಕೃಷಿ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾವು ಬೆಳೆಗಾರರಿಗೆ ಅನುಕೂಲವಾಗುವಂತೆ ಶೀಘ್ರದಲ್ಲೇ ಅಗತ್ಯ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಪ್ರಸಕ್ತ ಹಂಗಾಮಿನಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ತೀವ್ರ ಬೆಲೆ ಕುಸಿತವನ್ನು ತಡೆಯಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ನೆರವು ನೀಡಬೇಕು ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (PDPS) ಮೂಲಕ ಬೆಂಬಲ ಬೆಲೆ ಘೋಷಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ರೈತರು ಬೆಲೆ ಕುಸಿತ ಮತ್ತು ಹವಾಮಾನ ವೈಪರೀತ್ಯದಿಂದ ಎದುರಿಸುವ ಸಂಕಷ್ಟಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹವಾಮಾನ ವೈಪರೀತ್ಯ ಹಾಗೂ ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಗೌರವಾನ್ವಿತ ಶ್ರೀ @ChouhanShivraj ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಯಿತು.

ನನ್ನ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಕೃಷಿ ಸಚಿವರು,… pic.twitter.com/HqW17AAMGN

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 24, 2026

Author

ANU News

Follow Me
Other Articles
Previous

‘Centre pushing “One Nation, One Party” agenda through elections’: Meenakshi Natarajan

Next

‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Three CMs unite for inauguration of new crest gates at Tungabhadra reservoir
    • ಆಂಧ್ರ-ತೆಲಂಗಾಣ-ಕರ್ನಾಟಕ ಸಿಎಂಗಳ ಒಗ್ಗಟ್ಟಿಗೆ ಸಾಕ್ಷಿಯಾದ ‘ತುಂಗಭದ್ರಾ’
    • ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ
    • ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು
    • ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ
    Copyright 2026 — ANU News. All rights reserved. Blogsy WordPress Theme