Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

By ANU News
July 19, 2026 1 Min Read
Comments Off on ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಪೂಂಚ್ ಜಿಲ್ಲೆಯ ಸುರಂಕೋಟ್ ತಹಸಿಲ್‌ನ ಬುಫ್ಲಿಯಾಜ್‌ನ ಲೋವರ್ ಮುರ್ರಾ ಪ್ರದೇಶದಲ್ಲಿ ಪ್ರವಾಹದ ಹೊಡೆತಕ್ಕೆ ಸಿಲುಕಿದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಎಂಟು ಮಂದಿಯನ್ನು ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಪ್ರವಾಹದಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಮೊಬೈಲ್ ನೆಟ್‌ವರ್ಕ್ ಸೇವೆ ಅಸ್ತವ್ಯಸ್ತಗೊಂಡಿದೆ. ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ, ನಾಗರಿಕ ಆಡಳಿತ ಹಾಗೂ ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೊಘಲ್ ರಸ್ತೆ ಹಾಗೂ ರಾಜೌರಿ–ಪೂಂಚ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಹಾಗೂ ಸಂತ್ರಸ್ತರಿಗೆ ತಕ್ಷಣ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ನಡುವೆ, ಜುಲೈ 23ರವರೆಗೆ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಟ್ಟೆಚ್ಚರ ಅಧಿಕಾರಿಗಳು ತಿಳಿಸಿದ್ದಾರೆ.

Author

ANU News

Follow Me
Other Articles
Previous

MP Cabinet clears Uniform Civil Code Bill, to be tabled in Assembly

Next

Flash floods claim 10 lives in J&K; search on for missing persons

Recent Posts

  • Veteran Actor Dattanna Selected for Delhi Karnataka Sangha’s 2026 Theatre Award
  • Direct Evidence Against Krupa Alva, Says Hariprasad After Congress Expulsion
  • ಕೃಪಾ ಆಳ್ವಾ ವಿರುದ್ಧ ನೇರ ಸಾಕ್ಷ್ಯವಿದೆ; ಅದಕ್ಕಾಗಿಯೇ ಉಚ್ಚಾಟನೆ: ಬಿ.ಕೆ. ಹರಿಪ್ರಸಾದ್
  • ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ನಟ ದತ್ತಣ್ಣಗೆ 2026ನೇ ಸಾಲಿನ ಕನ್ನಡ ಭಾರತೀ ರಂಗ ಪ್ರಶಸ್ತಿ
  • Centre announces Census 2027 schedule; four poll-bound states get exemption
Copyright 2026 — ANU News. All rights reserved. Blogsy WordPress Theme