Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜೂನ್ 3ಕ್ಕೆ ಡಿಕೆಶಿ ಪಟ್ಟಾಭಿಷೇಕ! ಸರಳ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

By ANU News
May 30, 2026 1 Min Read
0

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.

ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಿದ ಬಳಿಕ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಅಧಿಕೃತವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ಮುನ್ನವೇ ಪ್ರಮಾಣವಚನಕ್ಕೆ ಸಮಯ ನಿಗಡಿಪಡಿಸಲಾಗಿದೆ.

ಇದೇ ವೇಳೆ, ಅಧಿಕಾರ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ನಡೆಸುವ ಬದಲು ಸರಳವಾಗಿ ಆಯೋಜಿಸಲು ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಅನಗತ್ಯ ವೆಚ್ಚ ತಪ್ಪಿಸುವ ಉದ್ದೇಶದಿಂದ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಸಂಜೆ ವೇಳೆ ಪ್ರಮಾಣ ವಚನ ಸಮಾರಂಭ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಆದ ಬಳಿಕ ಸ್ವತಃ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಜನರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಡಿ.ಕೆ. ಶಿವಕುಮಾರ್ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

Author

ANU News

Follow Me
Other Articles
Previous

IAF helicopters douse massive Kasauli forest fire with round-the-clock operations

Next

ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme