Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್‌ಗೆ ಸ್ಥಳಾಂತರ

By ANU News
August 13, 2026 1 Min Read
0

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್‌ನಿಂದ ಸಾಮಾನ್ಯ ಕೈದಿಗಳ ಸೆಲ್‌ಗೆ ಸ್ಥಳಾಂತರಿಸಲಾಗಿದೆ. ಜೈಲಿನೊಳಗಿಂದ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವುದಾಗಿ ಹೇಳಲಾದ 17 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್‌ಡ್ರೈವ್ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದವು ಎಂದು ಸುದ್ದಿಯಾಗಿವೆ. ಮೊಬೈಲ್‌ನಲ್ಲಿ ಹಲವು ಒಟಿಟಿ ಅಪ್ಲಿಕೇಶನ್‌ಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲು ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಮತ್ತು ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ, ಜೈಲಿನ ಕರ್ತವ್ಯದಲ್ಲಿದ್ದ ಸಹಾಯಕ ಸೂಪರಿಂಟೆಂಡೆಂಟ್ ಈರಣ್ಣ ಅವರನ್ನು ಅಮಾನತುಗೊಳಿಸಲಾಗಿದ್ದು, ಜೈಲು ಸೂಪರಿಂಟೆಂಡೆಂಟ್ ಅಂಶುಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಈ ನಡುವೆ, ಮೊಬೈಲ್ ಪತ್ತೆಯಾದ ಬಳಿಕ ಪ್ರಜ್ವಲ್ ಅವರನ್ನು ಸುಮಾರು 20 ಮಂದಿ ಕೈದಿಗಳಿರುವ ಸಾಮಾನ್ಯ ಸೆಲ್‌ಗೆ ಸ್ಥಳಾಂತರಿಸಿ, ಜೈಲಿನ ಗ್ರಂಥಾಲಯದಲ್ಲಿ ಕಡ್ಡಾಯ ಸಮವಸ್ತ್ರ ಧರಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

Author

ANU News

Follow Me
Other Articles
Previous

Monsoon intensifies across India; heavy rain forecast in several states, Delhi too

Next

Jail mobile phone controversy: Prajwal Revanna shifted to general barrack, officials face action

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Karnataka to host Urdu festival on Vidhana Soudha steps on Nov 9
    • ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ನ.9ರಂದು ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರದ ಆಶ್ರಯದಲ್ಲಿ ವಿಶಿಷ್ಟ ಕಾರ್ಯಕ್ರಮ
    • SIR completed states: ECI removes extra declaration from online Form 6
    • SIR ಮುಗಿದ ರಾಜ್ಯಗಳಲ್ಲಿ Form 6 ಬದಲಾವಣೆ; ಹೆಚ್ಚುವರಿ ಘೋಷಣೆ ವಾಪಸ್
    • ಸುಂದರ್ ಪಿಚೈ ‘ಮಾನ್‌ಸ್ಟರ್’ ಎಂದ ಟ್ರಂಪ್; ಶ್ವೇತಭವನದಲ್ಲಿ AI ಕುರಿತು ಮಹತ್ವದ ಚರ್ಚೆ
    Copyright 2026 — ANU News. All rights reserved. Blogsy WordPress Theme