Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗೆ ಶಿಕ್ಷೆ; ಕಾಂಗ್ರೆಸ್ ನಾಯಕರ ಹಳೆಯ ಟೀಕೆಗೆ ಬಿಜೆಪಿ ತರಾಟೆ

By ANU News
April 28, 2026 1 Min Read
0

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌ ಗೆ ನ್ಯಾಯಾಲಯ ಕಠಿಣ ಶಿಕ್ಷೆಯ ತೀರ್ಪು ಪ್ರಕಟಿಸಿದೆ. NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆಯ ತೀರ್ಪನ್ನು ಸೋಮವಾರ ಪ್ರಕಟಿಸಿದೆ.

ಈ ತೀರ್ಪನ್ನು ಸ್ವಾಗತಿಸಿರುವ ಕರ್ನಾಟಕ ಪ್ರದೇಶ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳ ಬಗ್ಗೆ ವ್ಯಂಗ್ಯವಾಡಿದೆ. ‘ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ ‘ಡೈವರ್ಶನ್ ಪಾಲಿಟಿಕ್ಸ್’ ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರದಲ್ಲೂ ಕೇವಲ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ ಪಕ್ಷದ ನೈಜ ಮುಖವಾಡ ಕಳಚಿದೆ’ ಎಂದು ಬರೆದುಕೊಂಡಿದೆ.

ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್‌ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್‌ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕಿದೆ ಎಂದು ಬಿಜೆಪಿ ಪ್ರತಿಪಾದಿಸಿದೆ.

ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ ‘ಡೈವರ್ಶನ್ ಪಾಲಿಟಿಕ್ಸ್’ ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ @DKShivakumar ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ!

ಅದೇ ಪ್ರಕರಣದ ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ… pic.twitter.com/wmyJufXDab

— BJP Karnataka (@BJP4Karnataka) April 27, 2026

Author

ANU News

Follow Me
Other Articles
Previous

Mangaluru Dasara gets boost as ₹67 crore underground cabling project cleared

Next

Mangaluru cooker blast case: NIA court sentences Shareek to 10 years; BJP hits out at Congress

No Comment! Be the first one.

Leave a Reply Cancel reply

Your email address will not be published. Required fields are marked *

Recent Posts

  • IOS SAGAR ಕಾರ್ಯಾಚರಣೆ ಯಶಸ್ವಿ; ಕೊಚ್ಚಿಗೆ ಮರಳಿದ ಐಎನ್‌ಎಸ್ ಸುನಯನ
  • (no title)
  • ಭಾರತ-ಇಟಲಿ ನಡುವೆ ‘ವಿಶೇಷ ಕಾರ್ಯತಂತ್ರದ ಪಾಲುದಾರಿಕೆ’ ಘೋಷಣೆ
  • ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ
  • ಹಣದುಬ್ಬರ, ನಿರುದ್ಯೋಗ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
Copyright 2026 — ANU News. All rights reserved. Blogsy WordPress Theme