Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸರ್ಕಾರಿ ನೌಕರಿ, ನೀಟ್ ಆಮಿಷ; ಅಂತಾರಾಜ್ಯ ವಂಚಕರ ಬಂಧನ

By ANU News
June 6, 2026 1 Min Read
0

ಕಲಬುರಗಿ: ಸರ್ಕಾರಿ ಉದ್ಯೋಗ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ವಂಚಿಸಲು ಯತ್ನಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರಿ ಕೊಡಿಸುವುದಾಗಿ, ಜೊತೆಗೆ ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಂದ ತಲಾ 5 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವರ ಬಳಿ ಹಲವು ನಕಲಿ ದಾಖಲೆ ಪತ್ರಗಳು ಪತ್ತೆಯಾಗಿವೆ.

ಈ ಪ್ರಕರಣದ ಹಿಂದೆ ಕಾರ್ಯನಿರ್ವಹಿಸುತ್ತಿರುವ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Author

ANU News

Follow Me
Other Articles
Previous

ಬಂಟ್ವಾಳದಲ್ಲಿ 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ; ಮೂವರ ಬಂಧನ

Next

ಏಷ್ಯಾ ಕಪ್ ಕಂಚು ಗೆದ್ದ ಭಾರತ ಮಹಿಳಾ U-18 ಹಾಕಿ ತಂಡ; ಪ್ರಧಾನಿ ಮೋದಿ ಅಭಿನಂದನೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ
    • Probe sought into alleged lapses, poor quality in Jal Jeevan Mission works
    • Kannada school reopens in Qatar with renewed focus on language, culture
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
    • Mekedatu project is only permanent solution to Cauvery dispute, says K’taka minister
    Copyright 2026 — ANU News. All rights reserved. Blogsy WordPress Theme