Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

By ANU News
May 29, 2026 1 Min Read
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಮರಳಿದ ಬಳಿಕ, ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಈ ಕುರಿತು ಕಾರ್ಯದರ್ಶಿ ಅಲ್ಲಮ ಪ್ರಭು ಪ್ರಕಟಣೆ ಹೊರಡಿಸಿದ್ದು, ದೆಹಲಿಯಲ್ಲಿ ಇರುವ ಎಲ್ಲಾ ಶಾಸಕರಿಗೂ ತಕ್ಷಣ ಬೆಂಗಳೂರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಸಭೆಗೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ.

ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಹೈಕಮಾಂಡ್‌ನ ಅಂತಿಮ ತೀರ್ಮಾನವೇ ಸಭೆಯಲ್ಲಿ ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿಂದೆ ನಡೆದಂತೆ ಚುನಾವಣೆಯ ಬದಲು ನೇರ ಘೋಷಣೆಯೇ ನಡೆಯಬಹುದು ಎನ್ನಲಾಗುತ್ತಿದೆ.

ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಭಾಗವಹಿಸಲಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಇದೇ ಸಭೆಯಲ್ಲಿ ತೆರೆ ಬೀಳುವ ಸಾಧ್ಯತೆ ಇದೆ.

ಇದಲ್ಲದೆ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಳಿಕ ಮುಂದಿನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ದಿನಾಂಕವೂ ಘೋಷಣೆಯಾಗುವ ಸಾಧ್ಯತೆ ಇದೆ.

Author

ANU News

Follow Me
Other Articles
Previous

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

Next

K’taka CLP Meeting Scheduled for Saturday Evening in Bengaluru

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme