Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶಪ್ರಾದೇಶಿಕ

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

By ANU News
May 25, 2026 1 Min Read
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ D. K. ಶಿವಕುಮಾರ್ (D. K. Shivakumar) ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 26ರಂದು ಇಬ್ಬರು ನಾಯಕರು ದೆಹಲಿಗೆ ತೆರಳಲಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹೇಳಿತ್ತು. ಈ ಹಿನ್ನೆಲೆ, ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳಿಂದ ಮುಖ್ಯಮಂತ್ರಿ ಸ್ಥಾನ ಹಸ್ತಾಂತರ ಕುರಿತಂತೆ ಶೀತಲ ಸಮರ ನಡೆಯುತ್ತಿರುವ ಬೆನ್ನಲ್ಲೇ, ಹೈಕಮಾಂಡ್ ಇದೀಗ ಈ ವಿಚಾರಕ್ಕೆ ಅಂತಿಮ ರೂಪ ನೀಡಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಲು ಸಿಎಂ ದೆಹಲಿಗೆ ತೆರಳುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ Rahul Gandhi ಅವರನ್ನು ಭೇಟಿಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಆದರೆ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಹಾಗೂ ರಾಜ್ಯ ಕಾಂಗ್ರೆಸ್‌ನ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತೂ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Author

ANU News

Follow Me
Other Articles
Previous

ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

Next

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
    • BJP Alleges Irregularities in Voter List Revision, Targets Congress Over SIR Process
    • ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
    • Eight Killed in Separate Accidents in Andhra Pradesh and Telangana
    • ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ
    Copyright 2026 — ANU News. All rights reserved. Blogsy WordPress Theme