Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ಹಾವೇರಿ ಬಳಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು

By ANU News
May 5, 2026 1 Min Read
0

ಹಾವೇರಿ: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪಲ್ಲಕ್ಕಿ ಬಸ್‌ನಲ್ಲಿ ದೇವರಗುಡ್ಡದ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗುವ ಮುನ್ನವೇ ಚಾಲಕ ಪಕ್ಕೀರಪ್ಪ ಎಚ್ಚೆತ್ತುಕೊಂಡು ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಳಿಕ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಯುವಂತೆ ಸೂಚಿಸಿದ್ದು, ಇದರಿಂದ ಭಾರಿ ದುರಂತ ತಪ್ಪಿದೆ.

ಆದರೆ ಕೆಲವೇ ನಿಮಿಷಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿ ಇಡೀ ಬಸ್ ಧಗಧಗನೆ ಹೊತ್ತಿ ಉರಿದಿದೆ. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿಗೆ ನಿಖರ ಕಾರಣ ತಿಳಿದುಬರಬೇಕಿದೆ.

Author

ANU News

Follow Me
Other Articles
Previous

‘TVK Era’ Begins in Tamil Nadu; ‘Dalapathy’ Vijay Scripts Stunning Political Rise

Next

ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
    • BJP Alleges Irregularities in Voter List Revision, Targets Congress Over SIR Process
    • ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
    • Eight Killed in Separate Accidents in Andhra Pradesh and Telangana
    • ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ
    Copyright 2026 — ANU News. All rights reserved. Blogsy WordPress Theme